ಆಕ್ಸಿಜನ್‌ ಬಿಕ್ಕಟ್ಟು: ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ!

ಕೋವಿಡ್-19 ಸೊಂಕಿತರಿಗಾಗಿ ಪ್ರಸ್ತುತ ಪೂರೈಸುತ್ತಿರುವ ದೈನಂದಿನ ಆಕ್ಸಿಜನ್‌ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕೆಂಬ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಆಕ್ಸಿಜನ್‌ ಬಿಕ್ಕಟ್ಟು: ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ!
Linkup
ನವದೆಹಲಿ: ಕೋವಿಡ್-19 ಸೊಂಕಿತರಿಗಾಗಿ ಪ್ರಸ್ತುತ ಒದಗಿಸುತ್ತಿರುವ ದೈನಂದಿನ ಧ್ರುವೀಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 1200 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕೆಂಬ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಕರ್ನಾಟಕಕ್ಕೆ ಈಗಾಗಲೇ 965 ಟನ್‌ ಪೂರೈಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ತುರ್ತಾಗಿ ತಡೆಹಿಡಿಯುವ ಅಗತ್ಯವಿದೆ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದಲ್ಲಿ ಮನವಿ ಮಾಡಿದ್ದಾರೆ. ಪ್ರಸ್ತುತ ಕರ್ನಾಟಕಕ್ಕೆ 965 ಮೆಟ್ರಿಕ್ ಟನ್ ಧ್ರುವೀಕೃತ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ದಿನೇದಿನೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಪ್ರತಿ ದಿನ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಒದಗಿಸಬೇಕು ಎಂದು ಬುಧವಾರವಷ್ಟೇ ಆದೇಶಿಸಿತ್ತು. ಕೇಂದ್ರದ ನಡೆಗೆ ಶಾಕ್‌ ಕೇಂದ್ರ ಸರಕಾರದ ಈ ನಡೆಗೆ ಕರ್ನಾಟಕ ಕಾಂಗ್ರೆಸ್‌ ಆಘಾತ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಸೋಂಕಿತರು ಹೆಚ್ಚುತ್ತಲೇ ಇದ್ದು, ಪ್ರಸ್ತುತ ದಿನಕ್ಕೆ 1471 ಟನ್‌ ಆಕ್ಸಿಜನ್‌ಗೆ ಬೇಡಿಕೆ ಇದೆ. ಆದರೆ, ಕೇವಲ 865 ಟನ್‌ ಆಕ್ಸಿಜನ್‌ ಅಷ್ಟೇ ಪೂರೈಕೆಯಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.