ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!

ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ. ಜಕಾರ್ತಾ: ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ.  ಶನಿವಾರ ಫೈನಲ್​ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್‌ ಸೂಪರ್‌-1000ನಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹಿರಿಮೆ ಪಾತ್ರರಾಗಿದ್ದರು. ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. Into the history books, again: @badmintonphoto@himantabiswa | @sanjay091968 | @lakhaniarun1 #IndonesiaOpen2023#IndonesiaOpenSuper1000#IndiaontheRise#Badminton pic.twitter.com/ELNFTIPlsi— BAI Media (@BAI_Media) June 18, 2023 ಅಂತಿಮ ಪಂದ್ಯದ ವೇಳೆ, ಸಾತ್ವಿಕ್-ಚಿರಾಗ್ ಮೊದಲ ಗೇಮ್‌ನ ಆರಂಭದಲ್ಲಿ ತತ್ತರಿಸಿದ ನಂತರ ತಮ್ಮ ವೇಗವನ್ನು ಹೆಚ್ಚಿಸಿದರು. ಆಟದ ಮಧ್ಯಂತರ ವಿರಾಮದವರೆಗೆ 11-9 ಮುನ್ನಡೆ ಸಾಧಿಸಿದರು. ಇದಾದ ಬಳಿಕ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡ ಭಾರತದ ಜೋಡಿ ಮೊದಲ ಗೇಮ್ ಅನ್ನು ನಿರಾಯಾಸವಾಗಿ ಗೆದ್ದುಕೊಂಡಿತು. ಎರಡನೆ ಗೇಮ್‌ನಲ್ಲಿ ಸಾತ್ವಿಕ್-ಚಿರಾಗ್ ಅದ್ಬುತವಾಗಿ ಆರಂಭಿಸಿದರು. ಆದಾಗ್ಯೂ, ಮಲೇಷ್ಯಾ ಜೋಡಿ ನಂತರ ಮರಳಿತು. ಆದರೆ ಅಷ್ಟು ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು. ಈ ಫೈನಲ್ ಪಂದ್ಯ 43 ನಿಮಿಷಗಳ ಕಾಲ ನಡೆಯಿತು. ವಿಶ್ವ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನದಲ್ಲಿರುವ ಭಾರತದ ಜೋಡಿ ಮೊದಲ ಬಾರಿಗೆ ಸೂಪರ್-1000 ಟೂರ್ನಿಯ ಫೈನಲ್ ತಲುಪಿತ್ತು. ಸಾತ್ವಿಕ್-ಚಿರಾಗ್ ಸೂಪರ್-1000 ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಜೋಡಿ ಎನಿಸಿಕೊಂಡಿದ್ದಾರೆ. ಸಾತ್ವಿಕ್-ಚಿರಾಗ್ ಸೆಮಿಫೈನಲ್‌ನಲ್ಲಿ ಕೊರಿಯಾದ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದರು.

ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!
Linkup
ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ. ಜಕಾರ್ತಾ: ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಇತಿಹಾಸ ನಿರ್ಮಿಸಿದೆ.  ಶನಿವಾರ ಫೈನಲ್​ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್‌ ಸೂಪರ್‌-1000ನಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹಿರಿಮೆ ಪಾತ್ರರಾಗಿದ್ದರು. ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅಂತಿಮ ಪಂದ್ಯದ ವೇಳೆ, ಸಾತ್ವಿಕ್-ಚಿರಾಗ್ ಮೊದಲ ಗೇಮ್‌ನ ಆರಂಭದಲ್ಲಿ ತತ್ತರಿಸಿದ ನಂತರ ತಮ್ಮ ವೇಗವನ್ನು ಹೆಚ್ಚಿಸಿದರು. ಆಟದ ಮಧ್ಯಂತರ ವಿರಾಮದವರೆಗೆ 11-9 ಮುನ್ನಡೆ ಸಾಧಿಸಿದರು. ಇದಾದ ಬಳಿಕ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡ ಭಾರತದ ಜೋಡಿ ಮೊದಲ ಗೇಮ್ ಅನ್ನು ನಿರಾಯಾಸವಾಗಿ ಗೆದ್ದುಕೊಂಡಿತು. ಎರಡನೆ ಗೇಮ್‌ನಲ್ಲಿ ಸಾತ್ವಿಕ್-ಚಿರಾಗ್ ಅದ್ಬುತವಾಗಿ ಆರಂಭಿಸಿದರು. ಆದಾಗ್ಯೂ, ಮಲೇಷ್ಯಾ ಜೋಡಿ ನಂತರ ಮರಳಿತು. ಆದರೆ ಅಷ್ಟು ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು. ಈ ಫೈನಲ್ ಪಂದ್ಯ 43 ನಿಮಿಷಗಳ ಕಾಲ ನಡೆಯಿತು. ವಿಶ್ವ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನದಲ್ಲಿರುವ ಭಾರತದ ಜೋಡಿ ಮೊದಲ ಬಾರಿಗೆ ಸೂಪರ್-1000 ಟೂರ್ನಿಯ ಫೈನಲ್ ತಲುಪಿತ್ತು. ಸಾತ್ವಿಕ್-ಚಿರಾಗ್ ಸೂಪರ್-1000 ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಜೋಡಿ ಎನಿಸಿಕೊಂಡಿದ್ದಾರೆ. ಸಾತ್ವಿಕ್-ಚಿರಾಗ್ ಸೆಮಿಫೈನಲ್‌ನಲ್ಲಿ ಕೊರಿಯಾದ ಮಿನ್ ಹ್ಯುಕ್ ಕಾಂಗ್ ಮತ್ತು ಸೆಯುಂಗ್ ಜೇ ಸಿಯೊ ಅವರನ್ನು 17-21 21-19 21-18 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದರು. ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!