ಈಶಾನ್ಯ ದಿಲ್ಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಕಲಿತಾ, ನತಾಶಾ ಮತ್ತು ಇಕ್ಬಾಲ್ ತನ್ಹಾಗೆ ಜಾಮೀನು

ಈಶಾನ್ಯ ದಿಲ್ಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದಿಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈಶಾನ್ಯ ದಿಲ್ಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಕಲಿತಾ, ನತಾಶಾ ಮತ್ತು ಇಕ್ಬಾಲ್ ತನ್ಹಾಗೆ ಜಾಮೀನು
Linkup
ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ () ಅಡಿ ಪ್ರಕರಣಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿ ಕಾರ್ಯಕರ್ತರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಮಂಗಳವಾರ ನೀಡಿದೆ. 'ಪಿಂಜ್ರಾ ಟೋಡ್' ಸಮೂಹದ ಸದಸ್ಯರಾಗಿರುವ ಕಲಿತಾ ಮತ್ತು ನರ್ವಾಲ್ ಅವರನ್ನು ಈಶಾನ್ಯ ದಿಲ್ಲಿಯಲ್ಲಿನ ವಿರೋಧಿ ಪ್ರತಿಭಟನೆ ವೇಳೆ ಕೋಮು ಗಲಭೆಗೆ ಸಂಬಂಧಿಸಿದಂತೆ ಕಳೆದ ವರ್ಷದ ಮೇ ತಿಂಗಳಿನಲ್ಲಿ ಬಂಧಿಸಲಾಗಿತ್ತು. ಅವರನ್ನು ದಿಲ್ಲಿ ಪೊಲೀಸ್ ಅಪರಾಧ ಘಟಕ ಬಂಧಿಸಿತ್ತು. ಗಲಭೆ, ಅಕ್ರಮ ಗುಂಪುಸೇರುವಿಕೆ ಮತ್ತು ಕೊಲೆ ಪ್ರಯತ್ನ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣಗಳನ್ನು ದಾಖಲಿಸಿತ್ತು. ಗಲಭೆಗೆ ಪೂರ್ವ ನಿಯೋಜಿತ ಸಂಚು ರೂಪಿಸಿದ್ದರ ಭಾಗವಾಗಿದ್ದ ಆರೋಪದಲ್ಲಿ, ಪ್ರತ್ಯೇಕ ಪ್ರಕರಣದಲ್ಲಿ ಅವರ ವಿರುದ್ಧ ಕಠಿಣ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕೂಡ ಪ್ರಕರಣ ದಾಖಲು ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮಿರ್ದೂಲ್ ಮತ್ತು ಎ.ಜೆ ಭಂಭಾನಿ ಅವರನ್ನು ಒಳಗೊಂಡ ನ್ಯಾಯಪೀಠವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಎರಡು ಸ್ಥಳೀಯ ಶ್ಯೂರಿಟಿಗಳೊಂದಿಗೆ 50,000 ರೂಪಾಯಿ ವೈಯಕ್ತಿಕ ಬಾಂಡ್ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಕಲಿತಾ ವಿರುದ್ಧ ನಾಲ್ಕು ಹಾಗೂ ನತಾಶಾ ವಿರುದ್ಧ ಮೂರು ಪ್ರಕರಣಗಳಿವೆ. ತಮ್ಮ ಫೋನ್ ಸಂಖ್ಯೆಗಳನ್ನು ಸ್ಥಳೀಐ ಎಸ್‌ಎಚ್‌ಒಗೆ ನೀಡಬೇಕು. ತಮ್ಮ ವೈಯಕ್ತಿಕ ದಾಖಲೆಗಳಲ್ಲಿ ಉಲ್ಲೇಖಿಸಿರುವ ತಮ್ಮ ಮನೆಗಳಲ್ಲಿಯೇ ಉಳಿದುಕೊಳ್ಳಬೇಕು. ನಿವಾಸದ ಬದಲಾವಣೆ ಇದ್ದರೆ ಎಸ್‌ಎಚ್‌ಒಗೆ ಮೊದಲೇ ಮಾಹಿತಿ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.