ಉರಿಯುತ್ತಿದೆ ಬಂಗಾಳ: ಪ್ರಧಾನಿಯಿಂದ ರಾಜ್ಯಪಾಲರಿಗೆ ಕರೆ, 'ಸುಮ್ಮನಿರುವಂತೆ' ದೀದಿ ಮನವಿ!

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ರಾಜಕೀಯ ಹಿಂಸಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಇನ್ನು ಚುನಾವಣೋತ್ತರ ರಾಜಕೀಯ ಹಿಂಸಾಚಾರವನ್ನು ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ.

ಉರಿಯುತ್ತಿದೆ ಬಂಗಾಳ: ಪ್ರಧಾನಿಯಿಂದ ರಾಜ್ಯಪಾಲರಿಗೆ ಕರೆ, 'ಸುಮ್ಮನಿರುವಂತೆ' ದೀದಿ ಮನವಿ!
Linkup
ಕೋಲ್ಕತ್ತಾ: ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೇ, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ಭುಗಿಲೆದ್ದಿದೆ. ಬಂಗಾಳ ಅಕ್ಷರಶಃ ಹೊತ್ತಿ ಉರಿಯುತ್ತಿದ್ದು, ಚುನಾವಣಾ ಪೂರ್ವ ದ್ವೇಷಮಯ ಪರಿಸ್ಥಿತಿ ಈಗಲೂ ಮುಂದುವರೆದಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ರಾಜಕೀಯ ಹಿಂಸಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ , ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ತಡೆಗಟ್ಟುವ ತುರ್ತು ಅವಶ್ಯಕತೆಯನ್ನು ಒತ್ತಿ ಹೇಳಿರುವ ಪ್ರಧಾನಿ, ಈ ನಿಟ್ಟಿನಲ್ಲಿ ಆಡಳಿತ ಯಂತ್ರ ಗಮನಹರಿಸುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಖುದ್ದು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್, ಪ್ರಧಾನಿ ಅವರೊಂದಿಗೆ ರಾಜ್ಯದ ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಹಂಚಿಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಧಾನಿ ಅವರಿಗೆ ಭರವಸೆ ನೀಡಿದ್ದಾಗಿ ಜಗದೀಪ್ ಧನ್ಕರ್ ಮಾಹಿತಿ ನೀಡಿದ್ದಾರೆ. ಮಮತಾ ಮನವಿ: ಇನ್ನು ಚುನಾವಣೋತ್ತರ ರಾಜಕೀಯ ಹಿಂಸಾಚಾರವನ್ನು ಖಂಡಿಸಿರುವ ಟಿಎಂಸಿ ಅಧಿನಾಯಕಿ , ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯ ಕರೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಘಟನಾವಳಿಗಳಿಂದ ಮನಸ್ಸಿಗೆ ತೀವ್ರ ನೋವಾಗಿದೆ. ಜನ ಶಾಂತಿಯನ್ನು ಕಾಪಾಡುವ ಮೂಲಕ ಈ ಹಿಂಸಾಚಾರವನ್ನು ಕೊನೆಗಾಣಿಸಬೇಕಿದೆ ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ಈ ಮಧ್ಯೆ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ, ಚುನಾವಣಾ ಸೋಲನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ ಹಿಂಸಾಚಾರವನ್ನು ತಹಬದಿಗೆ ತರಲು ರಾಜ್ಯ ಡಿಜಿಪಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಇಂದು(ಮೇ4-ಮಂಗಳವಾರ) ಮಮತಾ ಬ್ಯಾನರ್ಜಿ ಸಭೆ ನಡೆಸಲಿದ್ದಾರೆ.