ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ದಾಳಿ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ವಿದೇಶಾಂಗ ಸಚಿವಾಲಯ

ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.  ನವದೆಹಲಿ: ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.  ಹೌತಿ ಬಂಡುಕೋರರ ದಾಳಿ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾತನಾಡಿದ್ದು, ನೌಕಾಯಾನ, ವಾಣಿಜ್ಯ ಸಾಗಣೆಯ ಮುಕ್ತ ಚಲನೆ ಸ್ವಾತಂತ್ರ್ಯಕ್ಕೆ ನಾವು ಹೆಚ್ಚಿನ ಮಹತ್ವ ನೀಡುತ್ತೇವೆ, ಈ ಪರಿಸ್ಥಿತಿಯ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ” ಎಂದು ಜೈಸ್ವಾಲ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ಇದನ್ನೂ ಓದಿ: ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ಹಾವಳಿ, ಎಚ್ಚರಿಕೆ ನಡುವೆಯೇ ಮತ್ತೊಂದು ಕಾರ್ಗೋ ಶಿಪ್ ಮೇಲೆ ದಾಳಿ "ನಿಮಗೆ ತಿಳಿದಿರುವಂತೆ, ನಮ್ಮಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಅಲ್ಲಿನ ಭಾರತೀಯ ಹಡಗುಗಳ ಮೇಲೂ ನಿಗಾ ಇಡುತ್ತಿದ್ದಾರೆ”" ಎಂದು ಅವರು ಹೇಳಿದರು. ಜೈಸ್ವಾಲ್ ಹೇಳಿಕೆಗೂ ಮುನ್ನ ಭಾರತೀಯ ನೌಕಾಪಡೆಯು ತನ್ನ ಹಡಗುಗಳು ಮತ್ತು ವಿಮಾನಗಳನ್ನು ಉತ್ತರ ಮತ್ತು ಮಧ್ಯ ಅರೇಬಿಯನ್ ಸಮುದ್ರದಲ್ಲಿ ಕಣ್ಗಾವಲಿಗಾಗಿ ಮತ್ತು ಕಡಲ ಭದ್ರತಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ನಿಯೋಜಿಸಿದೆ ಎಂದು ಹೇಳಿತ್ತು. ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಕಳೆದೆರಡು ವಾರಗಳಲ್ಲಿ ಇರಾನ್ ಬೆಂಬಲಿತ ಹೌತಿ ಉಗ್ರಗಾಮಿಗಳು ಕೆಂಪು ಸಮುದ್ರದಲ್ಲಿ ಹಲವಾರು ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ.

ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ದಾಳಿ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ವಿದೇಶಾಂಗ ಸಚಿವಾಲಯ
Linkup
ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.  ನವದೆಹಲಿ: ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರು, ಹಲವು ವಾಣಿಜ್ಯ ಹಡಗುಗಳ ಮೇಲೆ ಈ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.  ಹೌತಿ ಬಂಡುಕೋರರ ದಾಳಿ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾತನಾಡಿದ್ದು, ನೌಕಾಯಾನ, ವಾಣಿಜ್ಯ ಸಾಗಣೆಯ ಮುಕ್ತ ಚಲನೆ ಸ್ವಾತಂತ್ರ್ಯಕ್ಕೆ ನಾವು ಹೆಚ್ಚಿನ ಮಹತ್ವ ನೀಡುತ್ತೇವೆ, ಈ ಪರಿಸ್ಥಿತಿಯ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ” ಎಂದು ಜೈಸ್ವಾಲ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ಇದನ್ನೂ ಓದಿ: ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ಹಾವಳಿ, ಎಚ್ಚರಿಕೆ ನಡುವೆಯೇ ಮತ್ತೊಂದು ಕಾರ್ಗೋ ಶಿಪ್ ಮೇಲೆ ದಾಳಿ "ನಿಮಗೆ ತಿಳಿದಿರುವಂತೆ, ನಮ್ಮಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಅಲ್ಲಿನ ಭಾರತೀಯ ಹಡಗುಗಳ ಮೇಲೂ ನಿಗಾ ಇಡುತ್ತಿದ್ದಾರೆ”" ಎಂದು ಅವರು ಹೇಳಿದರು. ಜೈಸ್ವಾಲ್ ಹೇಳಿಕೆಗೂ ಮುನ್ನ ಭಾರತೀಯ ನೌಕಾಪಡೆಯು ತನ್ನ ಹಡಗುಗಳು ಮತ್ತು ವಿಮಾನಗಳನ್ನು ಉತ್ತರ ಮತ್ತು ಮಧ್ಯ ಅರೇಬಿಯನ್ ಸಮುದ್ರದಲ್ಲಿ ಕಣ್ಗಾವಲಿಗಾಗಿ ಮತ್ತು ಕಡಲ ಭದ್ರತಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ನಿಯೋಜಿಸಿದೆ ಎಂದು ಹೇಳಿತ್ತು. ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಕಳೆದೆರಡು ವಾರಗಳಲ್ಲಿ ಇರಾನ್ ಬೆಂಬಲಿತ ಹೌತಿ ಉಗ್ರಗಾಮಿಗಳು ಕೆಂಪು ಸಮುದ್ರದಲ್ಲಿ ಹಲವಾರು ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ. ಕೆಂಪು ಸಮುದ್ರದಲ್ಲಿ ಹೌತಿ ಬಂಡುಕೋರರ ದಾಳಿ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ವಿದೇಶಾಂಗ ಸಚಿವಾಲಯ