ಕೊರೊನಾರ್ಭಟ: ಬಂಗಾಳದಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶ ರದ್ದು ಮಾಡಿದ ರಾಹುಲ್..!

'ಕೊರೊನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಮಾವೇಶ ನಡೆಸುವ ಕುರಿತಾಗಿ ರಾಜಕೀಯ ಪಕ್ಷಗಳು ಆಳವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳಬೇಕು' - ರಾಜಕೀಯ ಪಕ್ಷಗಳಿಗೆ ರಾಹುಲ್ ಗಾಂಧಿ ಆಗ್ರಹ

ಕೊರೊನಾರ್ಭಟ: ಬಂಗಾಳದಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶ ರದ್ದು ಮಾಡಿದ ರಾಹುಲ್..!
Linkup
ಹೊಸ ದಿಲ್ಲಿ: ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ನಾಯಕ ಹೊಸದೊಂದು ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಚುನಾವಣಾ ಪ್ರಚಾರ ಸಮಾವೇಶಗಳನ್ನು ರದ್ದುಪಡಿಸಿದ್ದಾರೆ. ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಚುನಾವಣಾ ಪ್ರಚಾರ ಸಮಾವೇಶವನ್ನೂ ರದ್ದು ಮಾಡಲಾಗಿದ್ದು, ತಾವೂ ಕೂಡಾ ಪ್ರಚಾರದಲ್ಲಿ ಭಾಗಿ ಆಗೋದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ಇನ್ನಿತರ ರಾಜಕೀಯ ಪಕ್ಷಗಳೂ ಕೂಡಾ ಈ ಸಂದರ್ಭದಲ್ಲಿ ಯಾವುದೇ ರೀತಿಯ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಬಾರದು, ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಆಳವಾಗಿ ಯೋಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.