ಕೊರೊನಾ ಅಬ್ಬರ, ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ ಮುಂದೂಡಿಕೆ

ಕಾಂಗ್ರೆಸ್‌ನ ಚುನಾವಣಾ ಸಮಿತಿಯು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜೂನ್‌ 23ಕ್ಕೆ ಚುನಾವಣೆ ನಡೆಸಲು ಈ ಹಿಂದೆ ನಿರ್ಧರಿಸಿತ್ತು. ಮೂಲಗಳ ಪ್ರಕಾರ ಅಧ್ಯಕ್ಷೀಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್‌ 7 ರಂದು ಅಂತಿಮ ದಿನಾಂಕವೂ ಆಗಿತ್ತು. ಆದರೆ ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಿಕೆಯಾಗುತ್ತಿದೆ.

ಕೊರೊನಾ ಅಬ್ಬರ, ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ ಮುಂದೂಡಿಕೆ
Linkup
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷರ ಚುನಾವಣೆಯನ್ನು ಮುಂದೂಡಲು ಸೋಮವಾರ ನಿರ್ಧರಿಸಿದೆ. ಈ ಹಿಂದೆ ಕಾಂಗ್ರೆಸ್‌ನ ಚುನಾವಣಾ ಸಮಿತಿಯು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜೂನ್‌ 23ಕ್ಕೆ ಚುನಾವಣೆ ನಡೆಸಲು ಸೂಚಿಸಿತ್ತು. ಮೂಲಗಳ ಪ್ರಕಾರ ಅಧ್ಯಕ್ಷೀಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೂನ್‌ 7 ರಂದು ಅಂತಿಮ ದಿನಾಂಕವಾಗಿ ನಿಗದಿ ಮಾಡಲಾಗಿತ್ತು. ಆದರೆ ಕಾಂಗ್ರೆಸ್‌ನ ಉನ್ನತ ನೀತಿ ನಿರ್ಧಾರಕ ಸಮಿತಿಯಾದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷೀಯ ಚುನಾವಣೆಯನ್ನು ತಡವಾಗಿ ನಡೆಸಲು ನಿರ್ಧರಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲಿಂದ ಪಕ್ಷದ ಪೂರ್ಣಕಾಲಿಕ ಅಧ್ಯಕ್ಷ ಹುದ್ದೆ ಖಾಲಿಯಿದೆ. ರಾಹುಲ್‌ ರಾಜೀನಾಮೆ ಬಳಿಕ ಅವರ ತಾಯಿ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ ಅವರೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಲು ಇಲ್ಲಿಯವರೆಗೆ ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ.