ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ನಟ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲು

ಮೂತ್ರಪಿಂಡ ಸಮಸ್ಯೆಯಿಂದಾಗಿ ತಮಿಳು ನಟ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ಹಬ್ಬಿಸಿದ ನಟ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
Linkup
ಕೊರೊನಾ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳು ನಟ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದಾಗಿ ತಮಿಳು ನಟ ಮನ್ಸೂರ್ ಅಲಿ ಖಾನ್ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಡ್ನಿ ಸ್ಟೋನ್‌ನಿಂದಾಗಿ ತೀವ್ರ ನೋವಿನಿಂದ ಮನ್ಸೂರ್ ಅಲಿ ಖಾನ್ ಬಳಲುತ್ತಿದ್ದಾರೆ. ಈಗಾಗಲೇ ಕೆಲ ಪರೀಕ್ಷೆಗಳನ್ನು ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ನೆರವೇರಿಸಲು ಆಸ್ಪತ್ರೆಯ ವೈದ್ಯರು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. 2 ಲಕ್ಷ ರೂಪಾಯಿ ದಂಡ ವಿಧಿಸಿದ್ದ ಕೋರ್ಟ್ ಕೊರೊನಾ ಲಸಿಕೆ ಪಡೆದ ಮಾರನೇ ದಿನ ಹೃದಯಾಘಾತದಿಂದ ತಮಿಳು ನಟ ವಿವೇಕ್ ನಿಧನ ಹೊಂದಿದ್ದರು. ಕೊರೊನಾ ಲಸಿಕೆ ಪಡೆದುಕೊಂಡಿದ್ದಕ್ಕೂ, ವಿವೇಕ್‌ಗೆ ಹೃದಯಾಘಾತ ಸಂಭವಿಸಿದ್ದಕ್ಕೂ ಸಂಬಂಧ ಇಲ್ಲ. ಆದರೂ ಇದೇ ವಿಚಾರದ ಬಗ್ಗೆ ಮಾತನಾಡಿ ಲಸಿಕೆ ಬಗ್ಗೆ ಮನ್ಸೂರ್ ಅಲಿ ಖಾನ್ ತಪ್ಪು ಸಂದೇಶ ರವಾನಿಸಿದ್ದರು. ಕೊರೊನಾ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ ನೀಡಿ ಮಾತನಾಡಿದ್ದ ಮನ್ಸೂರ್ ಅಲಿ ಖಾನ್‌ರವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನ ಗಮನಿಸಿದ ಆರೋಗ್ಯಾಧಿಕಾರಿ ದೂರು ಸಲ್ಲಿಸಿದ್ದರು. ಮನ್ಸೂರ್ ಅಲಿ ಖಾನ್ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು. ಪ್ರಕರಣವನ್ನು ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಮನ್ಸೂರ್ ಅಲಿ ಖಾನ್‌ಗೆ 2 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಲಸಿಕೆ ಖರೀದಿ ಮಾಡಲು ತಮಿಳುನಾಡು ಆರೋಗ್ಯ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ನೀಡಬೇಕು ಎಂದು ಮನ್ಸೂರ್ ಅಲಿ ಖಾನ್‌ಗೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಇದೀಗ ಅನಾರೋಗ್ಯದಿಂದ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನ್ಸೂರ್ ಅಲಿ ಖಾನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.