ಜಿನ್ನಾಗೂ ಭಾರತೀಯ ಮುಸ್ಲಿಮರಿಗೂ ಏನು ಸಂಬಂಧ?: ಅಖಿಲೇಶ್‌ಗೆ ಇತಿಹಾಸ ಗೊತ್ತಿಲ್ಲ ಎಂದ ಒವೈಸಿ!
ಜಿನ್ನಾಗೂ ಭಾರತೀಯ ಮುಸ್ಲಿಮರಿಗೂ ಏನು ಸಂಬಂಧ?: ಅಖಿಲೇಶ್‌ಗೆ ಇತಿಹಾಸ ಗೊತ್ತಿಲ್ಲ ಎಂದ ಒವೈಸಿ!
ಪಾಕಿಸ್ತಾನ ಸೃಷ್ಟಿಕರ್ತ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರ ಎಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ತರಾಟೆಗೆ ತಗೆದುಕೊಂಡಿದ್ದಾರೆ.
ಹೊಸದಿಲ್ಲಿ: ಪಾಕಿಸ್ತಾನ ಸೃಷ್ಟಿಕರ್ತ ಅವರನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರ ಎಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅವರನ್ನು, ಎಐಎಂಐಎಂ ಸಂಸದ ತರಾಟೆಗೆ ತಗೆದುಕೊಂಡಿದ್ದಾರೆ.
ಇಂತಹ ಬೇಜವಾಬ್ದಾರಿತನದ ಹೇಳಿಕೆ ನೀಡಿ ಅಖಿಲೇಶ್ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂದು ಭಾವಿಸಿದ್ದರೆ ಅದು ಅವರ ತಪ್ಪು ಕಲ್ಪನೆ. ಭಾರತೀಯ ಮುಸ್ಲಿಮರಿಗೂ ಮೊಹಮ್ಮದ್ ಅಲಿ ಜಿನ್ನಾಗೂ ಏನೂ ಸಂಬಂಧವಿಲ್ಲ ಎಂದು ಒವೈಸಿ ಗುಡುಗಿದ್ದಾರೆ.
ಭಾರತೀಯ ಮುಸ್ಲಿಮರು ಜಿನ್ನಾ ಅವರ ದ್ವಿರಾಷ್ಟ್ರ ಸಿದ್ಧಾಂತವನ್ನು ತಿರಸ್ಕರಿಸಿದವರು. ಪಾಕಿಸ್ತಾನಕ್ಕೆ ಹೋಗುವ ಆಯ್ಕೆಯನ್ನು ತಿರಸ್ಕರಿಸಿ ಭಾರತದಲ್ಲೇ ನೆಲೆಸಿದವರು. ಹೀಗಾಗಿ ಭಾರತೀಯ ಮುಸ್ಲಿಮರಿಗೂ ಜಿನ್ನಾ ಅವರಿಗೂ ಸಂಬಂಧ ಕಲ್ಪಿಸುವುದು ಅಸಂಬದ್ಧ ಎದು ಒವೈಸಿ ಹರಿಹಾಯ್ದಿದ್ದಾರೆ.
ಅಖಿಲೇಶ್ ಯಾದವ್ ಇತಿಹಾಸವನ್ನು ಸರಿಯಾಗಿ ಅರಿತಿಲ್ಲ ಎಂಬುದು ಈ ಸಂಗತಿಯಿಂದ ಗೊತ್ತಾಗುತ್ತದೆ. ಜಿನ್ನಾ ಅವರನ್ನು ಹೊಗಳಿ ಭಾರತೀಯ ಮುಸ್ಲಿಮರನ್ನು ಓಲೈಸಬಹುದು ಎಂದು ಭಾವಿಸಿದ್ದರೆ ಅದು ಅವರ ಮೂರ್ಖತನವಷ್ಟೇ. ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಜಿನ್ನಾ ಅವರನ್ನು ಹೋಲಿಕೆ ಮಾಡುವುದು ಹಾಸ್ಯಾಸ್ಪದ ಎಂದು ಒವೈಸಿ ಹೇಳಿದ್ದಾರ.
ಅಖಿಲೇಶ್ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದು ನಿಲ್ಲಸಬೇಕು. ಉತ್ತರ ಪ್ರದೇಶದ ಜನರ ನೈಜ ಸಮಸ್ಯೆಗಳ ಬಗ್ಗೆ ಅಖಿಲೇಶ್ ಚರ್ಚೆ ಮಾಡಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಯಾವ ಕಾರಣಕ್ಕಾಗಿ ಮತದಾರರು ತಿರಸ್ಕರಿಸಿದ್ದಾರೆ ಎಂಬುದನ್ನು ಅಖಿಲೇಶ್ ಮನವರಿಕೆ ಮಾಡಿಕೊಳ್ಳಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ.
ಹರ್ದೋಹಿಯಲ್ಲಿ ಮಾತನಾಡುತ್ತಾ ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್, ಜವಾಹರಲಾಲ್ ನೆಹರೂ ಹಾಗೂ ಮೊಹಮ್ಮದ್ ಅಲಿ ಜಿನ್ನಾ ಒಂದೇ ಸಂಸ್ಥೆಯಿಂದ ಬ್ಯಾರಿಸ್ಟರ್ ಪದವಿ ಪಡೆದವರು. ಈ ಎಲ್ಲರೂ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಎಂದು ಅಖಿಲೇಶ್ ಯಾದವ್ ಹೇಳಿದ್ದರು.
ಅಖಿಲೇಶ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಬಿಜೆಪಿ ಕೂಡ ಅಖಿಲೇಶ್ ಅವರ ಹೇಳಿಕೆಯನ್ನು ಖಂಡಿಸಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ ಯಾದವ್ ಭಾರತವನ್ನು ಮತ್ತೊಮ್ಮೆ ಒಡೆಯುವವರ ಪರ ಮಾತನಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದರು.