ಡ್ರಗ್ಸ್ ಕೇಸ್: ಆಂಕರ್ ಅನುಶ್ರೀ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ!

ಮಂಗಳೂರು ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ‘’ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಶ್ರೀ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ. ಹೀಗಾಗಿ ಅಂದು ಪ್ರಕರಣ ದಾಖಲಾಗಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಅನುಶ್ರೀ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ ಇದೆ’’ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಡ್ರಗ್ಸ್ ಕೇಸ್: ಆಂಕರ್ ಅನುಶ್ರೀ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ!
Linkup
ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ‘’ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ. ಹೀಗಾಗಿ ಅಂದು ಪ್ರಕರಣ ದಾಖಲಾಗಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಅನುಶ್ರೀ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ ಇದೆ’’ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದೇನು? ‘’ಮಂಗಳೂರು ಡ್ರಗ್ಸ್ ಕೇಸ್ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಅಂತಿಮ ವರದಿ ಸಲ್ಲಿಕೆಯಾಗಿದೆ. ನಾನು ಆಯುಕ್ತನಾಗಿ ಬರುವಷ್ಟರೊಳಗೆ ತನಿಖೆ ಪೂರ್ಣಗೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ನಿರೂಪಕಿ ಅನುಶ್ರೀ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ. ಹೀಗಾಗಿ ಅಂದು ಪ್ರಕರಣ ದಾಖಲಿಸಿಕೊಂಡಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಅನುಶ್ರೀ ಅವರ ವಿಚಾರಣೆ ನಡೆಯುವ ಸಾಧ್ಯತೆ ಕಡಿಮೆ ಇದೆ’’ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ. ‘’ಅನುಶ್ರೀ ಡ್ರಗ್ಸ್ ತೆಗೆದುಕೊಂಡಿದ್ದರು’’ ಎಂದಿದ್ದ ಕಿಶೋರ್ ಅಮನ್ ಶೆಟ್ಟಿ ‘’ನಾನು ಸುಮಾರು 2007-08ರ ಸಮಯದಲ್ಲಿ ಬೆಂಗಳೂರಿನ ಒಂದು ಡ್ಯಾನ್ಸ್ ಅಕಾಡೆಮಿಯಲ್ಲಿದ್ದಾಗ ಟಿವಿ ಆಂಕರ್ ಆಗಿರುವ ಅನುಶ್ರೀ ಅವರಿಗೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನನ್ನ ಸ್ನೇಹಿತ ತರುಣ್ ಕೊರಿಯೋಗ್ರಫಿ ಮಾಡುತ್ತಿದ್ದ. ತರುಣ್ ಮೂಲಕವೇ ನನಗೆ ಅನುಶ್ರೀ ಪರಿಚಯವಾಯಿತು. ಡ್ಯಾನ್ಸ್ ರಿಯಾಲಿಟಿ ಶೋ ಫೈನಲ್‌ನಲ್ಲಿ ನನಗೂ ಸಹ ಕೊರಿಯೋಗ್ರಫಿ ಮಾಡುವಂತೆ ತಿಳಿಸಿದ್ದರಿಂದ, ನಾನು ಮತ್ತು ತರುಣ್.. ಇಬ್ಬರೂ ಕೂಡಿ ಅನುಶ್ರೀ ಅವರಿಗೆ ಡ್ಯಾನ್ಸ್ ಕೊರಿಯೋಗ್ರಫಿ ಮಾಡಿದ್ದೇವೆ. ಈ ಪ್ರೋಗ್ರಾಮ್‌ನಲ್ಲಿ ಅನುಶ್ರೀ ವಿನ್ ಆದರು. ತರುಣ್ ಅವರ ಬಾಡಿಗೆ ಮನೆಯಲ್ಲಿ ಅನುಶ್ರೀ ತಡರಾತ್ರಿ ತನಕ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದರು. ಕೆಲವು ದಿನ ನಾನು ಕೂಡ ತರುಣ್ ಜೊತೆ ಹೋಗುತ್ತಿದ್ದೆ. ಆಗ ನಾವು ಮೂರು ಜನ ತರುಣ್ ಮನೆಯಲ್ಲೇ ಅಡುಗೆ ಮಾಡಿ, ಊಟ ಮಾಡುವ ಸಮಯದಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಿರುತ್ತೇವೆ’’ ‘’ಅನುಶ್ರೀ ವಿಜೇತರಾಗಿದ್ದಕ್ಕೆ ನಾನು, ತರುಣ್ ಮತ್ತು ಅನುಶ್ರೀ ಬೆಂಗಳೂರಿನಲ್ಲಿ ಮಾದಕ ವಸ್ತುಗಳನ್ನು ಸೇವಿಸಿ, ಡ್ರಿಂಕ್ಸ್ ಪಾರ್ಟಿ ಮಾಡಿರುತ್ತೇವೆ. ಮಾದಕ ವಸ್ತು ಸೇವನೆ ಖರೀದಿಯಲ್ಲಿ ಅನುಶ್ರೀ ಭಾಗಿಯಾಗಿರುತ್ತಾರೆ. ನಾವು ಡ್ಯಾನ್ಸ್ ಪ್ರಾಕ್ಟೀಸ್ ಮಾಡುವ ಸಮಯ ಮತ್ತು ಅನುಶ್ರೀ ಅವರಿಗೆ ಕೊರಿಯೋಗ್ರಫಿ ಮಾಡುವ ಸಮಯದಲ್ಲಿ ಹಲವಾರು ಬಾರಿ ಮಾದಕ ವಸ್ತುಗಳನ್ನು ಸೇವಿಸಿರುತ್ತೇವೆ. ಅನುಶ್ರೀ ಅವರು ಪ್ರಾಕ್ಟೀಸ್ ಮಾಡಲು ನಮ್ಮ ರೂಮ್‌ಗೆ ಬರುವಾಗ ಅವರು ಮಾದಕ ವಸ್ತುಗಳನ್ನು ಖರೀದಿಸಿ ತಂದು ನಮಗೆ ನೀಡಿ, ನಮ್ಮ ಜೊತೆ ಸೇವನೆಯನ್ನೂ ಕೂಡ ಮಾಡಿರುತ್ತಾರೆ. ಡ್ರಗ್ಸ್ ಯಾರು ನೀಡುತ್ತಾರೆ ಎಂದು ಅನುಶ್ರೀ ಅವರಿಗೆ ನಮಗಿಂತ ಹೆಚ್ಚು ತಿಳಿದಿದೆ. ಅವರಿಗೆ ಡ್ರಗ್ಸ್ ಪೆಡ್ಲರ್‌ಗಳ ಪರಿಚಯ ಇರುತ್ತದೆ. ಅವರು ಸುಲಭವಾಗಿ ಮಾದಕ ವಸ್ತುಗಳನ್ನು ತರಿಸುತ್ತಾರೆ. ಅವರು ಹೇಗೆ ತರಿಸುತ್ತಾರೆ ಎಂಬುದು ನನಗೆ ತಿಳಿದಿಲ್ಲ’’ ಎಂದು ಡ್ರಗ್ಸ್ ಪ್ರಕರಣದ ಆರೋಪಿ ಕಿಶೋರ್ ಅಮನ್ ಶೆಟ್ಟಿ ಪೊಲೀಸರ ಮುಂದೆ ಹೇಳಿಕೆ ನೀಡಿ, ಸಹಿ ಹಾಕಿದ್ದಾರೆ. ಈ ಪ್ರತಿ ಇಂದು ಮಾಧ್ಯಮಗಳಿಗೆ ಲಭ್ಯವಾಗಿತ್ತು. ಚಾರ್ಜ್ ಶೀಟ್‌ನಲ್ಲಿರುವ ಹೇಳಿಕೆ ನಿರಾಕರಿಸಿದ ಕಿಶೋರ್ ಅಮನ್ ಶೆಟ್ಟಿ ಪೊಲೀಸರ ಮುಂದೆ ತಾವು ಕೊಟ್ಟಿರುವ ಹೇಳಿಕೆ ಬಹಿರಂಗವಾಗುತ್ತಿದ್ದಂತೆಯೇ, ಕಿಶೋರ್ ಅಮನ್ ಶೆಟ್ಟಿ ಉಲ್ಟಾ ಹೊಡೆದರು. ಚಾರ್ಜ್ ಶೀಟ್‌ನಲ್ಲಿರುವ ತಮ್ಮ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ನಿರಾಕರಿಸಿದರು. ‘’ಅನುಶ್ರೀ ಬಗ್ಗೆ ನಾನು ಆ ರೀತಿ ಹೇಳಿಕೆ ನೀಡಿಲ್ಲ. ಬೇರೆ ಯಾರು ಆ ರೀತಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅನುಶ್ರೀ ಜೊತೆ ನಾವು ಪಾರ್ಟಿಯಲ್ಲಿ ಶಾಮೀಲು ಆಗಿಲ್ಲ’’ ಎಂದಿದ್ದಾರೆ.