ತಮಿಳುನಾಡು ರಾಜ್ಯ ಬಿಜೆಪಿಗೆ ಅಣ್ಣಾಮಲೈ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿಗೆ ಮಹತ್ವದ ಜವಾಬ್ದಾರಿ

ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗುರುವಾರ ನೇಮಕ ಮಾಡಿದ್ದಾರೆ. ಈ ಮೂಲಕ ಮಾಜಿ ಅಧಿಕಾರಿಗೆ ಮಹತ್ವದ ಜವಾಬ್ದಾರಿ ನೀಡಿದ್ದಾರೆ.

ತಮಿಳುನಾಡು ರಾಜ್ಯ ಬಿಜೆಪಿಗೆ ಅಣ್ಣಾಮಲೈ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿಗೆ ಮಹತ್ವದ ಜವಾಬ್ದಾರಿ
Linkup
ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಎಲ್‌ ಮುರುಗನ್‌ ಬುಧವಾರ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ನೂತನ ಅಧ್ಯಕ್ಷರಾಗಿ ಕೆ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಪೊಲೀಸ್‌ ಸೇವೆಯಲ್ಲಿದ್ದ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ 2020ರ ಆಗಸ್ಟ್‌ನಲ್ಲಿ ಬಿಜೆಪಿ ಸೇರಿದ್ದರು. ಬೆನ್ನಿಗೇ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅಣ್ಣಾಮಲೈ ಬಿಜೆಪಿಯ ಹೈಕಮಾಂಡ್‌ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಜತೆ ಅವರ ಒಡನಾಟ ಚೆನ್ನಾಗಿದೆ. ಕೆಲ ತಿಂಗಳ ಹಿಂದೆ ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅಣ್ಣಾಮಲೈ ಅರವರಕುರುಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

ಇದೀಗ ಅಣ್ಣಾಮಲೈ ಅವರನ್ನು ನೇಮಕ ಮಾಡುವ ಮೂಲಕ ಚಾರ್ಮ್‌ ಇರುವ ನಾಯಕರಿಗೆ ಜವಾಬ್ದಾರಿ ನೀಡಿ 2024ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುವ ಸೂಚನೆಯನ್ನು ಬಿಜೆಪಿ ನೀಡಿದೆ