'ದಿಯಾ' ಹಿಟ್ ಆದ್ಮೇಲೆ ಈಗ ಟಾಲಿವುಡ್‌ನಲ್ಲೂ ಮಿಂಚಲಿದ್ದಾರೆ 'ನಾಗಿಣಿ' ಖ್ಯಾತಿಯ ದೀಕ್ಷಿತ್ ಶೆಟ್ಟಿ

2020ರಲ್ಲಿ ತೆರೆಕಂಡ ಸೂಪರ್ ಹಿಟ್ ಸಿನಿಮಾದಲ್ಲಿ ಹೀರೋ ಆಗಿದ್ದವರು ನಟ ದೀಕ್ಷಿತ್ ಶೆಟ್ಟಿ. ಅದಕ್ಕೂ ಮೊದಲು ಅವರು ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಫೇಮಸ್‌ ಆಗಿದ್ದವರು. ಇದೀಗ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ಅವರು, ನೇರವಾಗಿ ಟಾಲಿವುಡ್‌ಗೂ ಕಾಲಿಟ್ಟಿದ್ದಾರೆ.

'ದಿಯಾ' ಹಿಟ್ ಆದ್ಮೇಲೆ ಈಗ ಟಾಲಿವುಡ್‌ನಲ್ಲೂ ಮಿಂಚಲಿದ್ದಾರೆ 'ನಾಗಿಣಿ' ಖ್ಯಾತಿಯ ದೀಕ್ಷಿತ್ ಶೆಟ್ಟಿ
Linkup
'' ಧಾರಾವಾಹಿ ಖ್ಯಾತಿಯ ಕಳೆದ ವರ್ಷ ತೆರೆಕಂಡ '' ಸಿನಿಮಾದಿಂದ ಭಾರಿ ಜನಪ್ರಿಯತೆ ಪಡೆದುಕೊಂಡರು. ಆ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಆನಂತರ ಅವರನ್ನು ಟಾಲಿವುಡ್‌ ಕೈಬೀಸಿ ಕರೆದಿದೆ. ಈಗಾಗಲೇ ತೆಲುಗಿನ ಒಂದು ಸಿನಿಮಾದಲ್ಲಿ ಅವರು ಹೀರೋ ಆಗಿ ನಟಿಸಿದ್ದಾರೆ. ಜೊತೆಗೆ ಈ ಸಿನಿಮಾ ಏಕಕಾಲದಲ್ಲಿ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ತೆರೆಗೆ ಬರಲಿದೆ. ಚಿತ್ರದ ಶೀರ್ಷಿಕೆ 'ಆಣಿ ಮುತ್ತುಗಳು'! ತೆಲುಗಿನಲ್ಲಿ 'ಮುಗ್ಗುರು ಮೋಸಗಾಳ್ಳು' ಎಂದು ಹೆಸರು ಇಡಲಾಗಿದೆ. ಮೂಲ ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದೆ. ಚಿತ್ರಮಂದಿರ ಸ್ಟುಡಿಯೋಸ್ ಬ್ಯಾನರ್ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ 'ಆಣಿ ಮುತ್ತುಗಳು' ಚಿತ್ರಕ್ಕೆ ಅಭಿಲಾಷ್‌ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್‌ರಾವ್ ನಟಿಸಿದ್ದಾರೆ. ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆಯಂತೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಲವ್ ಸ್ಟೋರಿಯೂ ಸಿನಿಮಾದಲ್ಲಿದೆ. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ದೀಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ತ್ವಿಷಾ ಶರ್ಮಾ ನಟಿಸಿದ್ದು, ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ. ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಜಾ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಲಾಕ್ಡೌನ್ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆಯೇ ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ.