ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ನವರಸ ನಾಯಕ ಜಗ್ಗೇಶ್ ಅವರ ಪುತ್ರ ಯತಿರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಜಗ್ಗೇಶ್ ಪುತ್ರ ಯತಿರಾಜ್ ಪಾರಾಗಿದ್ದಾರೆ.

ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Linkup
ನವರಸ ನಾಯಕ ಅವರ ಪುತ್ರ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಜಗ್ಗೇಶ್ ಪುತ್ರ ಯತಿರಾಜ್ ಪಾರಾಗಿದ್ದಾರೆ. ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಯತಿರಾಜ್ ಪ್ರಯಾಣ ಮಾಡುತ್ತಿದ್ದರು. ಏಕಾಏಕಿ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ನಾಯಿಯನ್ನು ರಕ್ಷಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸಮಯಕ್ಕೆ ಸರಿಯಾಗಿ ಏರ್ ಬ್ಯಾಗ್ ಓಪನ್ ಆದ ಕಾರಣ ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಪಘಾತದಲ್ಲಿ ಯತಿರಾಜ್‌ಗೆ ಗಾಯಗಳಾಗಿಲ್ಲ. ಚಿಕ್ಕಬಳ್ಳಾಪುರದಿಂದ ವಾಪಸ್ ಬರುವಾಗ ಆಕ್ಸಿಡೆಂಟ್ ಆಗಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಅಪಘಾತ ಸಂಭವಿಸಿದೆ. ನಟ ಜಗ್ಗೇಶ್ ಟ್ವೀಟ್ ''ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ.. ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಹೊರ ಹೋದ ಮಗ ಯತಿರಾಜ್. ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರು ಟು ಚಿಕ್ಕಬಳ್ಳಾಪುರ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭ ಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ!'' ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.