ಪ್ರಧಾನಿ ಮೋದಿ ಭೇಟಿಗೆ ಸಿಗದ ಅವಕಾಶ: ಬಿಹಾರ ಸಿಎಂ ನಿತೀಶ್ ಕುಮಾರ್ ಅಸಮಾಧಾನ

ಬಿಹಾರದಲ್ಲಿ ಜಾತಿ ಗಣತಿ ನಡೆಸುವ ಕುರಿತಾದ ನಿರ್ಣಯ ಕೈಗೊಂಡಿದ್ದು, ಅದರ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೋರಲಾಗಿತ್ತು. ಆದರೆ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿಗೆ ಸಿಗದ ಅವಕಾಶ: ಬಿಹಾರ ಸಿಎಂ ನಿತೀಶ್ ಕುಮಾರ್ ಅಸಮಾಧಾನ
Linkup
ಹೊಸದಿಲ್ಲಿ: ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸುವ ಸಂಬಂಧ ಚರ್ಚಿಸಲು ಪ್ರಧಾನಿ ಅವರ ಭೇಟಿಗಾಗಿ ಸಮಯ ಕೇಳಲಾಗಿತ್ತು. ಆದರೆ ಈವರೆಗೂ ಅವರಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ, ಜೆಡಿಯು ಸಂಸದರು ಪ್ರಧಾನಿ ಅವರನ್ನು ಭೇಟಿ ಮಾಡಲು ಉದ್ದೇಶಿಸಿದ್ದರು. ಆದರೆ ಅದಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಬದಲಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವಂತೆ ಸೂಚಿಸಲಾಗಿತ್ತು. ಜಾತಿ ಆಧಾರಿತ ಗಣತಿಯು ಯಾವುದೇ ಕಾರಣವಿಲ್ಲದೆಯೂ ಕೆಲವು ಜನರಲ್ಲಿ ಅಸಮಾಧಾನ ಮೂಡಿಸಬಹುದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ' ನಡೆಸಬೇಕೇ ಅಥವಾ ಬೇಡವೇ ಎನ್ನುವುದು ಕೇಂದ್ರಕ್ಕೆ ಬಿಟ್ಟ ಸಂಗತಿ. ನಮ್ಮ ದೃಷ್ಟಿಕೋನಗಳನ್ನು ಅವರ ಮುಂದೆ ಇಡುವುದು ನಮ್ಮ ಕೆಲಸ. ಒಂದು ಜಾತಿಯವರು ಇಷ್ಟಪಡುತ್ತಾರೆ ಅಥವಾ ಇನ್ನೊಬ್ಬರು ಇಷ್ಟಪಡುವುದಿಲ್ಲ ಎಂದು ಯೋಚಿಸುವುದು ಬೇಡ. ಇದು ಪ್ರತಿಯೊಬ್ಬರ ಹಿತಾಸಕ್ತಿಗಾಗಿ ನಡೆಸುವುದು' ಎಂದು ನಿತೀಶ್ ಹೇಳಿದ್ದಾರೆ. 'ಇದರಿಂದ ಸಮಾಜದಲ್ಲಿ ಯಾವುದೇ ಉದ್ವಿಗ್ನತೆ ಉಂಟಾಗುವುದಿಲ್ಲ. ಬದಲಾಗಿ ಅವರಲ್ಲಿ ಸಂತಸ ಮೂಡಲಿದೆ. ಪ್ರತಿ ವರ್ಗದ ಜನರಿಗೂ ಯೋಜನೆಗಳ ಪ್ರಯೋಜನ ಸಿಗಲಿದೆ. ಇದು ಬ್ರಿಟಿಷರ ಕಾಲದಲ್ಲಿಯೂ ನಡೆದಿತ್ತು' ಎಂದಿದ್ದಾರೆ. ಬಿಹಾರದಲ್ಲಿ ನಿತೀಶ್ ಸರಕಾರದ ಮಿತ್ರ ಪಕ್ಷವಾಗಿರುವ ಬಿಜೆಪಿ, ಜಾತಿ ಗಣತಿ ಕುರಿತಂತೆ ಆತಂಕ ವ್ಯಕ್ತಪಡಿಸಿದೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಬಿಹಾರ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಹೇಳಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ ಜಾತಿ ಗಣತಿ ನಡೆಸುವ ಕುರಿತಾಗಿ ತೆಗೆದುಕೊಂಡ ನಿರ್ಣಯಕ್ಕೆ ಬಿಜೆಪಿಯ ಯಾವ ಶಾಸಕರೂ ವಿರೋಧ ವ್ಯಕ್ತಪಡಿಸಿರಲಿಲ್ಲ. ಈ ನಿರ್ಣಯವನ್ನು ಕೇಂದ್ರಕ್ಕೆ ರವಾನಿಸಲಾಗಿದೆ. ಆದರೆ ಈಗ ಅದರ ಬಗ್ಗೆ ವಿರೋಧಗಳು ವ್ಯಕ್ತವಾಗುತ್ತಿರುವುದು ಏಕೆ ಎನ್ನುವುದು ತಮಗೆ ಅರ್ಥವಾಗುತ್ತಿಲ್ಲ ಎಂದು ನಿತೀಶ್ ಕುಮಾರ್, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.