ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮತ್ತು ಮುಖಂಡರು   ವಿಧಾನಸೌಧ ಮತ್ತು ಕಾರ್ಯದರ್ಶಿ ಕಚೇರಿ ಇರುವ ವಿಧಾನಸೌಧದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.ಬರಪೀಡಿತ ರೈತರಿಗೆ ಪರಿಹಾರ ಹಾಗೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಘೋಷಣಾ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಮಾಜಿ ಸಚಿವರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದು ಬಿದ್ದಿದೆ. ಇದರ ನಡುವೆ ರಾಜ್ಯ ಸರ್ಕಾರ ದೆಹಲಿಯಲ್ಲಿ ಬೀಡುಬಿಟ್ಟಿದೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡುವುದಿಲ್ಲ ಎಂಬ ಭಾವನೆ ಅಪರಾಧಿಗಳಿಗಿದ್ದು, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ ಎಂದರು.  ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ: ಪ್ರಲ್ಹಾದ್ ಜೋಶಿ ಕರ್ನಾಟಕದ ಮತದಾರರು ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ ಆದರೆ ಕೇವಲ ಆರು ತಿಂಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದ ಕಾರಣ ಜನರು ಮತ್ತು ಆಡಳಿತ ಪಕ್ಷದ ಶಾಸಕರು ಸರ್ಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ, ತಮ್ಮ ವೈಫಲ್ಯಗಳಿಂದ ಜನಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ, ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದತ್ತ ಬೊಟ್ಟು ಮಾಡುವ ರಾಜಕೀಯ ನಾಟಕವಾಡುತ್ತಿದ್ದಾರೆ  ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಲೋ ದಿಲ್ಲಿ ಎಂದು ಬೀದಿ ನಾಟಕ ಮಾಡಲು ಹೊರಟಿದ್ದಾರೆ. ಆದರೆ ರಾಜ್ಯದ ರೈತರು ಬರ ಪರಿಹಾರ ಎಲ್ಲಿ ಎನ್ನುತ್ತಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಅನುದಾನ ಕೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ
Linkup
ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮತ್ತು ಮುಖಂಡರು   ವಿಧಾನಸೌಧ ಮತ್ತು ಕಾರ್ಯದರ್ಶಿ ಕಚೇರಿ ಇರುವ ವಿಧಾನಸೌಧದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.ಬರಪೀಡಿತ ರೈತರಿಗೆ ಪರಿಹಾರ ಹಾಗೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಘೋಷಣಾ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಮಾಜಿ ಸಚಿವರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದು ಬಿದ್ದಿದೆ. ಇದರ ನಡುವೆ ರಾಜ್ಯ ಸರ್ಕಾರ ದೆಹಲಿಯಲ್ಲಿ ಬೀಡುಬಿಟ್ಟಿದೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡುವುದಿಲ್ಲ ಎಂಬ ಭಾವನೆ ಅಪರಾಧಿಗಳಿಗಿದ್ದು, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ ಎಂದರು.  ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ: ಪ್ರಲ್ಹಾದ್ ಜೋಶಿ ಕರ್ನಾಟಕದ ಮತದಾರರು ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ ಆದರೆ ಕೇವಲ ಆರು ತಿಂಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದ ಕಾರಣ ಜನರು ಮತ್ತು ಆಡಳಿತ ಪಕ್ಷದ ಶಾಸಕರು ಸರ್ಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ, ತಮ್ಮ ವೈಫಲ್ಯಗಳಿಂದ ಜನಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ, ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದತ್ತ ಬೊಟ್ಟು ಮಾಡುವ ರಾಜಕೀಯ ನಾಟಕವಾಡುತ್ತಿದ್ದಾರೆ  ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಲೋ ದಿಲ್ಲಿ ಎಂದು ಬೀದಿ ನಾಟಕ ಮಾಡಲು ಹೊರಟಿದ್ದಾರೆ. ಆದರೆ ರಾಜ್ಯದ ರೈತರು ಬರ ಪರಿಹಾರ ಎಲ್ಲಿ ಎನ್ನುತ್ತಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಅನುದಾನ ಕೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು. ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ