ಬೆಂಗಳೂರು ದಕ್ಷಿಣದಲ್ಲಿ ಮೊಳಗಿದ ಕನ್ನಡದ ಕಹಳೆ, 'ಕನ್ನಡಕ್ಕಾಗಿ ನಾವು' ಅಭಿಯಾನದಲ್ಲಿ ಜನಸಾಗರ

ಕನ್ನಡ ಭಾಷೆ ನಮ್ಮೆಲ್ಲರ ಹೆಗ್ಗುರುತು, ಕರ್ನಾಟಕದ ಅತ್ಯಂತ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಸೊಗಡನ್ನು ಮುಂಬರುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಬೆಂಗಳೂರು ದಕ್ಷಿಣದಲ್ಲಿ ಮೊಳಗಿದ ಕನ್ನಡದ ಕಹಳೆ, 'ಕನ್ನಡಕ್ಕಾಗಿ ನಾವು' ಅಭಿಯಾನದಲ್ಲಿ ಜನಸಾಗರ
Linkup
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸುವ ನಿಟ್ಟಿನಲ್ಲಿ, 1200ಕ್ಕೂ ಅಧಿಕ ಐ.ಟಿ, ಬಿ.ಪಿ.ಓ ನೌಕರರು, ಆಟೋ ಡ್ರೈವರ್ ಗಳು ಹಾಗೂ ವಿದ್ಯಾರ್ಥಿಗಳು, ಜಯನಗರದ ಚಂದ್ರಗುಪ್ತ ಮೌರ್ಯ (ಶಾಲಿನಿ) ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಮತ್ತು ತೇಜಸ್ವೀ ಸೂರ್ಯ ಜತೆ ಪಾಲ್ಗೊಂಡು ಸಾಮೂಹಿಕವಾಗಿ ನಾಡಗೀತೆ ಗಾಯನದಲ್ಲಿ ಪಾಲ್ಗೊಂಡಿದ್ದು ವಿಶೇಷ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರಾಜ್ಯೋತ್ಸವದ ಪ್ರಯುಕ್ತ ಅಕ್ಟೊಬರ್ 24ರಿಂದ ನವೆಂಬರ್ 1ರವರೆಗೆ "" ಎನ್ನುವ ವಿಶಿಷ್ಟ ಅಭಿಯಾನವನ್ನು ಈ ವರ್ಷದಿಂದಲೇ ಆರಂಭಿಸಿದ್ದು, ದಕ್ಷಿಣ ಲೋಕಸಭಾ ವ್ಯಾಪ್ತಿಯಲ್ಲಿ ಐಟಿ ಉದ್ಯೋಗಿಗಳು ಹಾಗೂ ಎನ್.ಎಂ.ಕೆ. ಆರ್.ವಿ & ಎಸ್.ಎಸ್.ಎಂ.ಆರ್.ವಿ ಕಾಲೇಜು, ವಿಜಯಾ ಪಿಯು, ಪ್ರಥಮ ದರ್ಜೆ ಕಾಲೇಜು, ಬಿ.ಇ.ಎಸ್ & ನ್ಯಾಷನಲ್ ಕಾಲೇಜು ವಿದ್ಯಾರ್ಥಿಗಳು ನಾಡಗೀತೆ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಬಾರಿಸು ಕನ್ನಡ ಡಿಂಡಿಮವ ಗೀತೆಗಳಿಗೆ ಸಾಮೂಹಿಕ ಗಾಯನದಲ್ಲಿ ಧ್ವನಿಯಾಗಿದ್ದು, ರಾಜ್ಯಾದ್ಯಂತ ನಡೆದ ಈ ಅಭಿಯಾನಕ್ಕೆ 10 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ಗಮನಾರ್ಹ. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದ , " ಕನ್ನಡ ಭಾಷೆ ನಮ್ಮೆಲ್ಲರ ಹೆಗ್ಗುರುತು, ಕರ್ನಾಟಕದ ಅತ್ಯಂತ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಸೊಗಡನ್ನು ಮುಂಬರುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕಾರ್ಯಕ್ರಮಕ್ಕೆ ಆಗಮಿಸಿ, ನಾಡಗೀತೆ ಗಾಯನ ಕಾರ್ಯಕ್ರಮ ಅಭಿಯಾನದಲ್ಲಿ ಪಾಲ್ಗೊಂಡ ಸರ್ವರಿಗೂ ಕೃತಜ್ಞತೆಗಳು. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡದ ಸಂಸ್ಕೃತಿ, ಪರಂಪರೆಗೆ ಹೊಳಪು ನೀಡುವ ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಶ್ಲಾಘನೀಯ. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಕ್ಕೆ ಮಾನ್ಯ ಸಚಿವರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಕಾರ್ಯಕ್ರಮದ ದೃಶ್ಯಗಳನ್ನು ನವೆಂಬರ್ 1ರ ರಾಜ್ಯೋತ್ಸವ ದಿನದಂದು ಸಂಸದ ತೇಜಸ್ವಿ ಸೂರ್ಯ ಅವರ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಬೆಂಗಳೂರು ದಕ್ಷಿಣ ಸಂಸದ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.