ಬೆಂಗಳೂರು: ಬಡವರ ಅಕ್ಷಯಪಾತ್ರೆ ‘ಇಂದಿರಾ ಕ್ಯಾಂಟೀನ್‌’ನಲ್ಲಿ ಆಹಾರ ವಿತರಣೆ

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೇ 24ರವರೆಗೆ ಉಚಿತವಾಗಿ ಮೂರು ಹೊತ್ತು ಊಟ, ತಿಂಡಿ ನೀಡಲು ಸರಕಾರ ಆದೇಶಿಸಿದೆ. ಆಹಾರದ ಪೊಟ್ಟಣಗಳನ್ನು ಪಡೆಯಲು ಗುರುತಿನ ಚೀಟಿ ಕಡ್ಡಾಯ ಆದೇಶವನ್ನು ಬಿಬಿಎಂಪಿ ಹಿಂಪಡೆದಿದೆ. ಬಡವರು, ಕೂಲಿ ಕಾರ್ಮಿಕರು, ವಲಸಿಗರು ಗುರುತಿನ ಚೀಟಿಗಳನ್ನು ತೋರಿಸಿ ಆಹಾರ ಪೊಟ್ಟಣಗಳನ್ನು ಪಡೆಯಲು ಸಮಸ್ಯೆಯಾಗುತ್ತಿತ್ತು. ಗುರುತಿನ ಚೀಟಿ ತೋರಿಸದೆಯೇ ಕ್ಯಾಂಟೀನ್‌ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಬಹುದು.

ಬೆಂಗಳೂರು: ಬಡವರ ಅಕ್ಷಯಪಾತ್ರೆ ‘ಇಂದಿರಾ ಕ್ಯಾಂಟೀನ್‌’ನಲ್ಲಿ ಆಹಾರ ವಿತರಣೆ
Linkup
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆಯ ನಿಯಂತ್ರಣಕ್ಕೆ ಮೇ 24ರವರೆಗೆ ಲಾಕ್‌ಡೌನ್‌ ಹೇರಿರುವ ಹಿನ್ನೆಲೆಯಲ್ಲಿ ಬಡವರು, ಕೂಲಿ ಕಾರ್ಮಿಕರ ಹಸಿವು ನೀಗಿಸಲು ನಗರದಲ್ಲಿನ ಎಲ್ಲಇಂದಿರಾ ಕ್ಯಾಂಟೀನ್‌ಗಳಲ್ಲಿ ಬುಧವಾರ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೇ 24ರವರೆಗೆ ಉಚಿತವಾಗಿ ಮೂರು ಹೊತ್ತು ಊಟ, ತಿಂಡಿ ನೀಡಲು ಸರಕಾರ ಆದೇಶಿಸಿದೆ. ಆಹಾರದ ಪೊಟ್ಟಣಗಳನ್ನು ಪಡೆಯಲು ಗುರುತಿನ ಚೀಟಿ ಕಡ್ಡಾಯ ಆದೇಶವನ್ನು ಬಿಬಿಎಂಪಿ ಹಿಂಪಡೆದಿದೆ. ಬಡವರು, ಕೂಲಿ ಕಾರ್ಮಿಕರು, ವಲಸಿಗರು ಗುರುತಿನ ಚೀಟಿಗಳನ್ನು ತೋರಿಸಿ ಆಹಾರ ಪೊಟ್ಟಣಗಳನ್ನು ಪಡೆಯಲು ಸಮಸ್ಯೆಯಾಗುತ್ತಿತ್ತು. ಗುರುತಿನ ಚೀಟಿ ತೋರಿಸದೆಯೇ ಕ್ಯಾಂಟೀನ್‌ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಬಹುದು ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದ್ದಾರೆ. ಧರ್ಮರಾಯಸ್ವಾಮಿ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ ಅಡುಗೆ ಮನೆಗೆ ಭೇಟಿ ನೀಡಿ ಆಹಾರ ತಯಾರಿಕೆ ವಿಧಾನವನ್ನು ಪರಿಶೀಲಿಸಿದ ಮುಖ್ಯ ಆಯುಕ್ತರು, ನಗರದಲ್ಲಿ 15 ಕೇಂದ್ರೀಕೃತ ಅಡುಗೆ ಮನೆಗಳಿದ್ದು, ಇಲ್ಲಿತಯಾರಿಸಿದ ಆಹಾರವನ್ನು ಕಂಟೈನರ್‌ಗಳ ಮೂಲಕ ಇಂದಿರಾ ಕ್ಯಾಂಟೀನ್‌ಗಳಿಗೆ ಪೂರೈಸಲಾಗುತ್ತದೆ. ಕ್ಯಾಂಟೀನ್‌ಗಳಲ್ಲಿ ಪೊಟ್ಟಣಗಳನ್ನು ಸಿದ್ಧಪಡಿಸಿ ಬಡವರು, ಕೂಲಿ ಕಾರ್ಮಿಕರು, ವಲಸಿಗರಿಗೆ ಮೂರು ಹೊತ್ತು ಉಚಿತವಾಗಿ ನೀಡಲಾಗುವುದು. ಒಂದು ಹೊತ್ತಿಗೆ 1 ಲಕ್ಷದಂತೆ ದಿನಕ್ಕೆ 3 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.