ಬೆಂಗಳೂರು: ವೀಕೆಂಡ್, ರಜಾ ದಿನಗಳಲ್ಲಿ ಭಕ್ತರಿಗೆ ದೇವಾಲಯ ಪ್ರವೇಶವಿಲ್ಲ..!

ಶ್ರಾವಣ ಮಾಸವಾದ ಕಾರಣ ದೇವಾಲಯಗಳಿಗೆ ನಾನಾ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಭಕ್ತರು ದೇವರ ದರ್ಶನಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಕೋವಿಡ್‌- 19 ಸೋಂಕು ಹರಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಬೆಂಗಳೂರು: ವೀಕೆಂಡ್, ರಜಾ ದಿನಗಳಲ್ಲಿ ಭಕ್ತರಿಗೆ ದೇವಾಲಯ ಪ್ರವೇಶವಿಲ್ಲ..!
Linkup
: ಕೋವಿಡ್‌-19 ಮೂರನೇ ಅಲೆ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಶ್ರಾವಣ ಮಾಸದ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಭಕ್ತರಿಗೆ ಪ್ರವೇಶವನ್ನು ನಿಷೇಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮುಜರಾಯಿ ಇಲಾಖೆ ಹಾಗೂ ಎಲ್ಲಾ ಖಾಸಗಿ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ ಶ್ರಾವಣ ಮಾಸದ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಸಾರ್ವಜನಿಕರು/ಭಕ್ತರಿಗೆ ದೇವಾಲಯದ ಪ್ರವೇಶವನ್ನು ನಿಷೇಸಲಾಗಿದೆ. ಈ ದಿನಗಳಂದು ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿ ಮಾತ್ರ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಉಳಿದ ದಿನಗಳಲ್ಲಿ ಸರಕಾರದ ಮಾರ್ಗಸೂಚಿಗಳನ್ವಯ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಬುಧವಾರ ಆದೇಶ ಹೊರಡಿಸಿದ್ದಾರೆ. ಉಳಿದ ದಿನಗಳಂದು ಕೇಂದ್ರ ಸರಕಾರ, ರಾಜ್ಯ ಸರಕಾರ ಮತ್ತು ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ/ಮಾರ್ಗಸೂಚಿ ಹಾಗೂ ಆದೇಶಗಳಂತೆ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲು ಜಿಲ್ಲೆಯ ಎಲ್ಲಾ ತಾಲೂಕು ತಹಸೀಲ್ದಾರ್‌ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದೆ. ದೇವಾಲಯಗಳಿಗೆ ನಾನಾ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ದೇವರ ದರ್ಶನಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಕೋವಿಡ್‌- 19 ಸೋಂಕು ಹರಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಸಾರ್ವಜನಿಕರ/ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್‌ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಾಗೂ ಖಾಸಗಿ ದೇವಾಲಯಗಳಲ್ಲಿ ವಾರಾಂತ್ಯದಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಪ್ರವೇಶ ಕಲ್ಪಿಸಲಾಗುವುದು.