ಬೆಂಗಳೂರು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸುಸಜ್ಜಿತ 'ತಾಯಂದಿರ ಎದೆ ಹಾಲಿನ ಬ್ಯಾಂಕ್‌' : ಏನಿದರ ವಿಶೇಷತೆ?

ತಾಯಂದಿರ ಎದೆ ಹಾಲಿನ ಬ್ಯಾಂಕ್‌ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸದ್ದಿಲ್ಲದೆ ಆರಂಭವಾಗಿದೆ. ಈ ಸೇವೆಯಿಂದಾಗಿ ನೂರಾರು ನವಜಾತ ಶಿಶುಗಳಿಗೆ ಇದು ವರದಾನವಾಗಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ'ತಾಯಂದಿರ ಎದೆ ಹಾಲಿನ ಬ್ಯಾಂಕ್‌' ನಿರ್ಮಾಣ ಮಾಡಲಾಗಿದ್ದು, ಪ್ರತಿ ದಿನ 20-30 ತಾಯಂದಿರು ಎದೆ ಹಾಲನ್ನು ನೀಡುತ್ತಿದ್ದಾರೆ.

ಬೆಂಗಳೂರು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸುಸಜ್ಜಿತ 'ತಾಯಂದಿರ ಎದೆ ಹಾಲಿನ ಬ್ಯಾಂಕ್‌' : ಏನಿದರ ವಿಶೇಷತೆ?
Linkup
ಮಹಾಬಲೇಶ್ವರ ಕಲ್ಕಣಿ, ಕೋವಿಡ್‌ ಸೇರಿದಂತೆ ಹಲವು ಕಾರಣಗಳಿಂದ ವಿಳಂಬವಾಗಿದ್ದ '' ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸದ್ದಿಲ್ಲದೆ ಆರಂಭವಾಗಿದ್ದು, ನೂರಾರು ನವಜಾತ ಶಿಶುಗಳಿಗೆ ವರದಾನವಾಗಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ'ತಾಯಂದಿರ ಎದೆ ಹಾಲಿನ ಬ್ಯಾಂಕ್‌' ನಿರ್ಮಾಣ ಮಾಡಲಾಗಿದ್ದು, ಪ್ರತಿ ದಿನ 20-30 ತಾಯಂದಿರು ಎದೆ ಹಾಲನ್ನು ನೀಡುತ್ತಿದ್ದಾರೆ. ವಾರದಲ್ಲಿ4 ರಿಂದ 6 ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ದಿನವೊಂದಕ್ಕೆ 500 ಎಂ.ಎಲ್‌. ಹಾಲು ಬೇಡಿಕೆಯನ್ನು ಪೂರೈಸಲಾಗುತ್ತಿದೆ. ದಿನದಿಂದ ದಿನಕ್ಕೆ ಹಾಲಿನ ಬೇಡಿಕೆ ಹೆಚ್ಚುತ್ತಿದೆ. ಸದ್ಯ ರಾಜ್ಯದಲ್ಲಿರುವ ಏಕೈಕ ಎದೆ ಹಾಲಿನ ಕೇಂದ್ರ ಎನ್ನುವ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಪ್ರತಿ ಜಿಲ್ಲೆ, ತಾಲೂಕು ಕೇಂದ್ರಗಳಲ್ಲೂ ಈ ರೀತಿಯ ಕೇಂದ್ರ ಆರಂಭಿಸಿದಲ್ಲಿ ಇನ್ನಷ್ಟು ಅನುಕೂಲವಾಗಲಿದೆ ಎನ್ನುವ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಪ್ರತಿ ತಿಂಗಳು 1500 ಕ್ಕೂ ಅಧಿಕ ಹೆರಿಗೆ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 1,500ಕ್ಕೂ ಅಧಿಕ ಹೆರಿಗೆಗಳಾಗುತ್ತವೆ, ಪ್ರತಿ ತಿಂಗಳು ಜನಿಸುವ ಮಕ್ಕಳಲ್ಲಿ ಕನಿಷ್ಠ 150 ಶಿಶುಗಳಿಗೆ ಹೆಚ್ಚಿನ ಪ್ರಮಾಣದಲ್ಲಿಎದೆ ಹಾಲು ಅಗತ್ಯವಿರುತ್ತದೆ. ಈ ಬ್ಯಾಂಕ್‌ ಪ್ರಾರಂಭದ ಬಳಿಕ ನಮ್ಮಲ್ಲಿ ಜನಿಸಿದ ಯಾವ ಮಗುವೂ ಎದೆ ಹಾಲಿನಿಂದ ವಂಚಿತವಾಗುತ್ತಿಲ್ಲಎನ್ನುತ್ತಾರೆ ಆಸ್ಪತ್ರೆಯ ನಿರ್ದೇಶಕಿ ಡಾ. ಗೀತಾ ಶಿವಮೂರ್ತಿ. ಯಾರಿಗೆ ಅವಶ್ಯಕ? ಮಗುವಿನ ತಾಯಿ ಅನಾರೋಗ್ಯಕ್ಕೆ ಒಳಗಾದಾಗ, ತಾಯಿಗೆ ಎದೆ ಹಾಲು ಕೊರತೆ ಆದಾಗ, ಅನಾಥ ಮಗು, ಅವಧಿ ಪೂರ್ವ ಜನಿಸಿದ ಮಗು ಸೇಧಿರಿಧಿದಂತೆ ಒಟ್ಟಾರೆ ತನ್ನ ಹೆತ್ತ ತಾಯಿಯಿಂದ ಸೂಕ್ತ ಕಾಲಕ್ಕೆ ಹಾಲನ್ನು ಕುಡಿಯಲಾಗದ ಮಗುವಿಗೆ ಇದರ ಪ್ರಯೋಜನ ದೊರೆಯಲಿದೆ. ಹಾಲು ಸಂಗ್ರಹ ಹೇಗೆ? ಆಸ್ಪತ್ರೆಯಲ್ಲಿ ಹೆರಿಗೆಯಾಗುವ ತಾಯಂದಿರಿಂದ ಹಾಲು ಸಂಗ್ರಹಿಸಲಾಗುತ್ತದೆ. ಹೀಗೆ ಸಂಗ್ರಹಿಸಿದ ಹಾಲನ್ನು ಬ್ಯಾಕ್ಟೀರಿಯಾ ಪರೀಕ್ಷೆಗೆ ಒಳಪಡಿಸಿದ ನಂತರ -18 ಡಿಗ್ರಿ ಸೆಲ್ಸಿಯಸ್‌ ಉಧಿಷ್ಣಾಂಶದಲ್ಲಿ ಶೇಖರಿಸಿಡಲಾಗುತ್ತಿದೆ. ಇಂತಹ ಹಾಲನ್ನು ಗರಿಷ್ಠ 6 ತಿಂಗಳ ಕಾಲ ಸಂಗ್ರಹಿಸಿ ನೀಡಬಹುದು ಎನ್ನುತ್ತಾರೆ ವೈದ್ಯರು. ಯಾರು ಅರ್ಹರು?ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ತಾಯಂದಿರೆಲ್ಲ ಹಾಲನ್ನು ದಾನ ಮಾಡಲು ಸಾಧ್ಯವಾಗುವುದಿಲ್ಲ. ಎಚ್‌ಐವಿ ಸೋಂಕು, ಜ್ವರ ಅಥವಾ ಇನ್ನಿತರ ಗಂಭೀರ ಸಮಸ್ಯೆಗೆ ಒಳಗಾಗಿದ್ದರೆ ಹಾಲನ್ನು ದಾನವಾಗಿ ಕೊಡುವಂತಿಲ್ಲ. ತಜ್ಞರಿಂದ ಪರೀಕ್ಷೆಗೆ ಒಳಗಾದ ಬಳಿಕವಷ್ಟೇ ಇನ್ನೊಂದು ಶಿಶುವಿಗೆ ಹಾಲನ್ನು ನೀಡಬಹುದು. ಎದೆಹಾಲಿನ ಕೇಂದ್ರದ ಆರಂಭ ವಿಳಂಬವಾದರೂ ಸರಾಗವಾಗಿ ನಡೆದುಕೊಂಡು ಹೋಗುತ್ತಿದೆ. ನೂರಾರು ಮಕ್ಕಳಿಗೆ ಇದರಿಂದ ಅನುಕೂಲವಾಗಿದೆ. ಎದೆ ಹಾಲು ಸಂಗ್ರಹದ ಬಗ್ಗೆ ಸಾಕಷ್ಟು ಜಾಗೃತಿ ವಹಿಸುವ ಅವಶ್ಯಕತೆ ಇದೆ. -ಡಾ. ಗೀತಾ ಶಿವಮೂರ್ತಿ, ನಿರ್ದೇಶಕಿ, ವಾಣಿ ವಿಲಾಸ ಆಸ್ಪತ್ರೆ,ಬೆಂಗಳೂರು