ಬಜೆಟ್‌ ಅಧಿವೇಶನ : ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ 26 ದಿನ ನಿಷೇಧಾಜ್ಞೆ ಜಾರಿ!

ಬಜೆಟ್‌ ಅಧಿವೇಶನದ ಹಿನ್ನೆಲೆ ಗಿ ಮಾರ್ಚ್ 4ರಿಂದ 30ರವರೆಗೆ ವಿಧಾನಸೌಧ ಹಾಗೂ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಜೆಟ್‌ ಅಧಿವೇಶನ : ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ 26 ದಿನ ನಿಷೇಧಾಜ್ಞೆ ಜಾರಿ!
Linkup
: ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾರ್ಚ್ 4ರಿಂದ 30ರವರೆಗೆ ವಿಧಾನಸೌಧ ಹಾಗೂ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ. ಬಜೆಟ್‌ ಅಧಿವೇಶನದ ಅವಧಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆಯಂತಹ ಹೋರಾಟಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿರುವುದರಿಂದ ಹಾಗೂ ಅಧಿವೇಶನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲು ಅನುವಾಗುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಧಿವೇಶನ ನಡೆಯುವ ದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜಾರಿಯಾಗುವ ಪ್ರದೇಶಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಾಸ್ತ್ರ, ದೊಣ್ಣೆ, ಕಲ್ಲು, ಇಟ್ಟಿಗೆ ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಪಂತ್‌ ತಿಳಿಸಿದ್ದಾರೆ. ಮಾರ್ಚ್ 4ಕ್ಕೆ ಸಿಎಲ್‌ಪಿ ಸಭೆ ಬೆಂಗಳೂರು: ಬಜೆಟ್‌ ಅಧಿವೇಶನದ ಸಂದರ್ಭ­ದಲ್ಲಿಕೈಗೆತ್ತಿಕೊಳ್ಳಬೇಕಾದ ಹೋರಾಟದ ಬಗ್ಗೆ ಚರ್ಚಿಸಲು ಮಾ.4ರ ಸಂಜೆ ಕಾಂಗ್ರೆಸ್‌ ಶಾಸ­ಕಾಂಗ ಪಕ್ಷದ(ಸಿಎಲ್‌ಪಿ) ಸಭೆ ಕರೆಯಲಾಗಿದೆ. ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿಈ ಸಭೆ ನಡೆಯಲಿದೆ. ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್‌ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದರು. ಈ ಧರಣಿ ನಡುವೆಯೇ ಅಧಿವೇಶನ ವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಜೆಟ್‌ ಅಧಿವೇಶನದಲ್ಲಿ ಕಾಂಗ್ರೆಸ್‌ ನಡೆ ಏನಾಗಿರಲಿದೆ ಎಂಬ ಕುತೂಹಲವಿದೆ. ಈ ಕುರಿತು ಸೂಕ್ತ ನಿರ್ಣಯಕ್ಕೆ ಬರಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.