ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನಕ್ಕೆ ಕ್ರಮ: ಸಿಎಂ ಬೊಮ್ಮಾಯಿ ಭರವಸೆ

ಗುರುವಾರ ಕೇಂದ್ರ ಹಣಕಾಸು, ಆರೋಗ್ಯ ಹಾಗೂ ಭೂ ಸಾರಿಗೆ ಸಚಿವರುಗಳನ್ನು ಭೇಟಿ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಕೊರೊನಾ ವೈರಸ್ ಲಸಿಕೆ ಪೂರೈಕೆ ಸಂಬಂಧ ಆರೋಗ್ಯ ಸಚಿವರ ಜತೆ ಚರ್ಚೆ ಮಾಡುವೆ ಎಂದು ಅವರು ತಿಳಿಸಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನಕ್ಕೆ ಕ್ರಮ: ಸಿಎಂ ಬೊಮ್ಮಾಯಿ ಭರವಸೆ
Linkup
: ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮೈಸೂರಿನಲ್ಲಿ ನಡೆದ ಸಾಮೂಹಿಕ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಲಾಗಿದೆ. ಅದರ ಆಧಾರದ ಮೇಲೇ ದೂರು ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇನ್ನು ಗುರುವಾರ ಕೇಂದ್ರ ಹಣಕಾಸು, ಆರೋಗ್ಯ ಹಾಗೂ ಭೂ ಸಾರಿಗೆ ಸಚಿವರುಗಳನ್ನು ಭೇಟಿ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಕೊರೊನಾ ವೈರಸ್ ಲಸಿಕೆ ಪೂರೈಕೆ ಸಂಬಂಧ ಆರೋಗ್ಯ ಸಚಿವರ ಜತೆ ಚರ್ಚೆ ಮಾಡುವೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭೂ ಸಾರಿಗೆ ಸಚಿವ ಮನಸುಖ ಮಾಂಡವಿಯಾ ಅವರನ್ನೂ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ ಅವರ ಭೇಟಿ ಬಳಿಕವಾದ್ರೂ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ವ್ಯಾಕ್ಸಿನ್ ಪೂರೈಕೆಯಾಗುತ್ತಾ ಎಂದು ಕಾದು ನೋಡಬೇಕಿದೆ.