ರಾಷ್ಟ್ರಪತಿ ಚುನಾವಣೆ: ದೆಹಲಿ ವಿಮಾನ ಏರಿದ ದಳಪತಿಗಳು, ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರು?

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿರುವ ಪ್ರತಿಪಕ್ಷಗಳ ಮುಖಂಡರ ಸಭೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ದೆಹಲಿ ತೆರಳಿದ್ದಾರೆ. ಬುಧವಾರ ಬೆಳಗ್ಗೆ ಏಳು ಗಂಟೆಗೆ ದೆಹಲಿ ವಿಮಾನ ಏರಿದ ದಳಪತಿಗಳು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆ ನಡೆಯುತ್ತಿದೆ. ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.