'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ವಿದ್ಯುತ್ ಅವಘಡ; ಓರ್ವನ ಸಾವು!

'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್‌ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.

'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ವಿದ್ಯುತ್ ಅವಘಡ; ಓರ್ವನ ಸಾವು!
Linkup
ಇದೇ ಮೊದಲ ಬಾರಿಗೆ 'ಕೃಷ್ಣ' ಮತ್ತು ರಚಿತಾ ರಾಮ್‌ ಒಟ್ಟಿಗೆ ನಟಿಸುತ್ತಿರುವ ಸಿನಿಮಾ ''. ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್‌ ವೇಳೆ ನಡೆದ ಶಾರ್ಟ್‌ ಸರ್ಕ್ಯೂಟ್‌ನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಸೆಟ್‌ನಲ್ಲಿ ಆಗಿದ್ದೇನು? ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಹಾಗೆ, ಈ ಸಿನಿಮಾವನ್ನು ಶಂಕರ ರಾಜ್‌ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ನಿರ್ದೇಶಕ ಗುರು ದೇಶಪಾಂಡೆ ನಿರ್ಮಾಣದ ಜೊತೆಗೆ ಕ್ರಿಯೇಟಿವ್ ಹೆಡ್ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಶಶಾಂಕ್ 'ಲವ್ ಯೂ ರಚ್ಚು'ಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.