ವಿಪಕ್ಷಗಳಿಂದ ಪ್ರಜಾಪ್ರಭುತ್ವದ ಅಣಕ: ಕಲಾಪ ಭಂಗಕ್ಕೆ ಪ್ರಧಾನಿ ಮೋದಿ ಆಕ್ರೋಶ!

ಪೆಗಾಸಸ್ ನೆಪ ಮಾಡಿಕೊಂಡು ಮಾನ್ಸೂನ್ ಅಧಿವೇಶನದ ಕಲಾಪಕ್ಕೆ ಭಂಗ ತರುತ್ತಿರುವ ವಿಪಕ್ಷಗಳು, ಪ್ರಜಾಪ್ರಭುತ್ವವನ್ನು ಅಣಕಿಸುತ್ತಿವೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಬಿಜೆಪಿ ಸಂಸದೀಯ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

ವಿಪಕ್ಷಗಳಿಂದ ಪ್ರಜಾಪ್ರಭುತ್ವದ ಅಣಕ: ಕಲಾಪ ಭಂಗಕ್ಕೆ ಪ್ರಧಾನಿ ಮೋದಿ ಆಕ್ರೋಶ!
Linkup
ಹೊಸದಿಲ್ಲಿ: ಪೆಗಾಸಸ್ ನೆಪ ಮಾಡಿಕೊಂಡು ಮಾನ್ಸೂನ್ ಅಧಿವೇಶನದ ಕಲಾಪಕ್ಕೆ ಭಂಗ ತರುತ್ತಿರುವ ವಿಪಕ್ಷಗಳು, ಪ್ರಜಾಪ್ರಭುತ್ವವನ್ನು ಅಣಕಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಹೊಸದಿಲ್ಲಿ ಇಂದು(ಆ.03-ಮಂಗಳವಾರ) ನಡೆದ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದ್ದರೆ, ವಿಪಕ್ಷಗಳು ಕಲಾಪಕ್ಕೆ ಭಂಗ ತರುವ ಮೂಲಕ ಪ್ರಜಾಪ್ರಭುತ್ಬ, ಸಂವಿಧಾನ ಹಾಗೂ ಜನರಿಗೆ ದ್ರೋಹ ಬಗೆಯುತ್ತಿವೆ ಎಂದು ಹರಿಹಾಯ್ದರು. ಅಧಿವೇಶನದಲ್ಲಿ ಸಚಿವರ ಕೈಯಿಂದ ಕಾಗದ ಕಸಿದು ಅದನ್ನು ಹರಿದು ಹಾಕಲಾಗುತ್ತದೆ ಎಂದರೆ, ನಾಯಕರಿಗೆ ಸಂಸದೀಯ ನಡುವಳಿಕೆ ಬಗ್ಗೆ ಅದೆಷ್ಟು ಗೌರವವಿದೆ ಎಂಬುದು ತಿಳಿಯುತ್ತದೆ ಎಂದು ಪ್ರಧಾನಿ ಮೋದಿ ಅಸಮಾಧಾನ ಹೊರಹಾಕಿದರು. ಲೋಕಸಭೆಯಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ ಪೆಗಾಸಸ್ ಕುರಿತು ಸ್ಪಷ್ಟನೆ ನೀಡುವ ಸಂದರ್ಭದಲ್ಲಿ, ಟಿಎಂಸಿ ಸಂಸದ ಶಾಂತನು ಸೇನ್ ಕಾಗದ ಹರಿದು ಹಾಕಿದ ಘಟನೆಯನ್ನು ಮೋದಿ ಪ್ರಸ್ತಾಪಿಸಿದರು. ಕೋವಿಡ್ ಹಾವಳಿ ಹಾಗೂ ಅದರಿಂದ ಜನರಿಗೆ ಎದುರಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸಿದ್ದವಿಲ್ಲದ ವಿಪಕ್ಷಗಳು, ವಿನಾಕಾರಣ ಗೊಂದಲ ಸೃಷ್ಟಿಸುವಲ್ಲಿ ನಿರತವಾಗಿವೆ ಎಂದು ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದರು. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ತಮ್ಮನ್ನು ಆರಿಸಿ ಕಳಿಸಿದ ಜನರಿಗೆ ದ್ರೋಹ ಬಗೆಯುತ್ತಿರುವ ವಿಪಕ್ಷ ಸಂಸದರು, ಅಧಿವೇಶನದ ಉಳಿದ ಸಮಯವನ್ನಾದರೂ ಸದುಪಯೋಗಪಡಿಸಿಕೊಳ್ಳುವತ್ತ ಗಮನಹರಿಸಲಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು. ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಗೆ ಒತ್ತಾಯಿಸುತ್ತಿರುವ ವಿಪಕ್ಷಗಳ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿರಂತರ ಧರಣಿ ನಡೆಸುವ ಮೂಲಕ ಕಲಾಪಕ್ಕೆ ಅಡ್ಡಿಯನ್ನುಂಟು ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.