ಸ್ವಾತಂತ್ರ್ಯೋತ್ಸವದಂದು ಅಹಿತಕರ ಘಟನೆ ಸಾಧ್ಯತೆ; ರಾಜ್ಯ ರಾಜಧಾನಿಯಲ್ಲಿ ಪೊಲೀಸ್‌ ಕಟ್ಟೆಚ್ಚರ

ಗುಪ್ತದಳದ ಅಧಿಕಾರಿಗಳು ಮತ್ತು ಪೊಲೀಸ್‌ ಸಿಬ್ಬಂದಿಗಳು ರಾತ್ರಿ ಗಸ್ತು ತಿರುಗುತ್ತಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ. ಜತೆಗೆ ನಗರ ವ್ಯಾಪ್ತಿಯ ಸುತ್ತಮುತ್ತ ಅನುಮಾನಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದಂದು ಅಹಿತಕರ ಘಟನೆ ಸಾಧ್ಯತೆ; ರಾಜ್ಯ ರಾಜಧಾನಿಯಲ್ಲಿ ಪೊಲೀಸ್‌ ಕಟ್ಟೆಚ್ಚರ
Linkup
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಲು ನಗರದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣ, ಧಾರ್ಮಿಕ ಸ್ಥಳಗಳು, ಉದ್ಯಾನಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ನಗರದ ಎಲ್ಲ ವಿಭಾಗದ ಪೊಲೀಸರಿಂದ ಬಾಂಬ್‌ ಪತ್ತೆದಳ, ಶ್ವಾನದಳಗಳನ್ನು ಬಳಸಿಕೊಂಡು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಬಿಎಂಟಿಸಿ ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬನಶಂಕರಿ ದೇವಾಲಯ ಸೇರಿದಂತೆ ನಾನಾ ದೇವಾಲಯಗಳು ಮತ್ತು ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಶುಕ್ರವಾರದಿಂದಲೇ ತಪಾಸಣೆ ಪ್ರಾರಂಭಿಸಲಾಗಿದೆ. ಗುಪ್ತದಳದ ಅಧಿಕಾರಿಗಳು ಮತ್ತು ಪೊಲೀಸ್‌ ಸಿಬ್ಬಂದಿಗಳು ರಾತ್ರಿ ಗಸ್ತು ತಿರುಗುತ್ತಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ. ಜತೆಗೆ ನಗರ ವ್ಯಾಪ್ತಿಯ ಸುತ್ತಮುತ್ತ ಅನುಮಾನಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಮಾಲ್‌ಗಳು, ಬಸ್‌ ನಿಲ್ದಾಣಗಳು, ಪಾರ್ಕ್, ಉದ್ಯಾನವನ, ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಹಾಗೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿನ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮೇಲೆ ನಿಗಾ ವಹಿಸಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದ್ದಾರೆ. ಜತೆಗೆ, ಭದ್ರತಾ ವ್ಯವಸ್ಥೆಯನ್ನೂ ಮತ್ತಷ್ಟು ಬಿಗಿಗೊಳಿಸಲಾಗಿದೆ.