2017 ನಂತರದಲ್ಲಿನ ರಾಜ್ಯ ಪ್ರಶಸ್ತಿ ವಿತರಿಸಲು ಯಾರಿಗೂ ಆಸಕ್ತಿ ಇದ್ದಂತಿಲ್ಲ; ಈ ವರ್ಷವೂ ನಡೆಯೋದು ಡೌಟ್

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಇನ್ನೂ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಪ್ರಶಸ್ತಿಯನ್ನು ಯಾವಾಗ ನೀಡುತ್ತಾರೆ ಎಂಬುದು ಉತ್ತರವಿಲ್ಲದ ಪ್ರಶ್ನೆಯಾಗಿಯೇ ಉಳಿದಿದೆ. ಏನೋ ಸರ್ಕಸ್ ಮಾಡಿ 2017ರ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಕೆಲವು ತಿಂಗಳುಗಳ ಹಿಂದೆಯಷ್ಟೇ ನೀಡಲಾಯಿತು. ಇನ್ನುಳಿದ ವರ್ಷಗಳ ಪ್ರಶಸ್ತಿಯನ್ನು ಶೀಘ್ರದಲ್ಲೇ ವಿತರಿಸುತ್ತಾರೆ ಎಂಬ ನಿರೀಕ್ಷೆ ಹಲವರಲ್ಲಿತ್ತು.