2036ರ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.
2036 ರಲ್ಲಿ ಭಾರತವು ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಲಿದ್ದು, ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ವರ್ಗ ಇರುತ್ತದೆ. ಭಾರತದ ಧ್ವಜವು ಬಾಹ್ಯಾಕಾಶದಿಂದ ಕ್ರೀಡೆಯವರೆಗೆ ಇರುತ್ತದೆ. ಅಷ್ಟರ ಹೊತ್ತಿಗೆ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸಲು ನಮಗೆ ಸುಲಭವಾಗುತ್ತದೆ ಎಂದರು.
2014 ರ ನಂತರ ಕ್ರೀಡಾ ಮೂಲಸೌಕರ್ಯ, ಆಯ್ಕೆ ಪ್ರಕ್ರಿಯೆ ಮತ್ತು ಕ್ರೀಡಾಪಟುಗಳನ್ನು ಬೆಂಬಲಿಸುವ ಹಣಕಾಸು ಯೋಜನೆಗಳಲ್ಲಿ ಬದಲಾವಣೆ ತರಲು ಪ್ರಯತ್ನ ಮಾಡುತ್ತಿದ್ದು, ಭಾರತೀಯ ಅಥ್ಲೀಟ್‌ಗಳು ವಿಶ್ವ ಮಟ್ಟದಲ್ಲಿ ಹೊಸ ಇತಿಹಾಸವನ್ನು ಬರೆಯುತ್ತಿರುವ ಕ್ಷಣದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳು ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. #WATCH | Prime Minister Narendra Modi addresses the inaugural event of the 37th National Games at Pandit Jawaharlal Nehru Stadium in Margao. pic.twitter.com/7anJLvBnw2— ANI (@ANI) October 26, 2023
ಭಾರತದ ಯಶಸ್ವಿ ಕ್ರೀಡಾ ಕಥೆಯು ದೇಶದ ಒಟ್ಟಾರೆ ಯಶಸ್ಸಿನ ಕಥೆಗಿಂತ ಭಿನ್ನವಾಗಿಲ್ಲ, ಭಾರತ ಹೊಸ ದಾಖಲೆಗಳನ್ನು ಮಾಡುತ್ತಿದೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದೆ ಮತ್ತು ಇದನ್ನು ಕಳೆದ 30 ದಿನಗಳ ದೇಶದ ಸಾಧನೆಯಿಂದ ನೋಡಬಹುದು ಎಂದು ಪ್ರಧಾನಿ ತಿಳಿಸಿದರು. ಈ ಮಧ್ಯೆ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಥ್ಲೀಟ್‌ಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜ್ಯೋತಿಯನ್ನು ಅರ್ಪಿಸಿದರು.
ಇಂದಿನಿಂದ ನವೆಂಬರ್ 9ರವರೆಗೂ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 10,000 ಕ್ಕೂ ಹೆಚ್ಚು ಕ್ರೀಡಾಪಟುಗಳು 28 ಸ್ಥಳಗಳಲ್ಲಿ 43 ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಗೋವಾದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.
2036 ರಲ್ಲಿ ಭಾರತವು ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಲಿದ್ದು, ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ವರ್ಗ ಇರುತ್ತದೆ. ಭಾರತದ ಧ್ವಜವು ಬಾಹ್ಯಾಕಾಶದಿಂದ ಕ್ರೀಡೆಯವರೆಗೆ ಇರುತ್ತದೆ. ಅಷ್ಟರ ಹೊತ್ತಿಗೆ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸಲು ನಮಗೆ ಸುಲಭವಾಗುತ್ತದೆ ಎಂದರು.
2014 ರ ನಂತರ ಕ್ರೀಡಾ ಮೂಲಸೌಕರ್ಯ, ಆಯ್ಕೆ ಪ್ರಕ್ರಿಯೆ ಮತ್ತು ಕ್ರೀಡಾಪಟುಗಳನ್ನು ಬೆಂಬಲಿಸುವ ಹಣಕಾಸು ಯೋಜನೆಗಳಲ್ಲಿ ಬದಲಾವಣೆ ತರಲು ಪ್ರಯತ್ನ ಮಾಡುತ್ತಿದ್ದು, ಭಾರತೀಯ ಅಥ್ಲೀಟ್‌ಗಳು ವಿಶ್ವ ಮಟ್ಟದಲ್ಲಿ ಹೊಸ ಇತಿಹಾಸವನ್ನು ಬರೆಯುತ್ತಿರುವ ಕ್ಷಣದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳು ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
#WATCH | Prime Minister Narendra Modi addresses the inaugural event of the 37th National Games at Pandit Jawaharlal Nehru Stadium in Margao. pic.twitter.com/7anJLvBnw2— ANI (@ANI) October 26, 2023