Asian Games 2023: ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಭಾರತೀಯ ಕ್ರೀಡಾಪಟುಗಳು

ಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು. ಹ್ಯಾಂಗ್ಝೌ: ಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.
ಏಷ್ಯನ್ ಗೇಮ್ಸ್ 19ನೇ ಆವೃತ್ತಿ ಉದ್ಘಾಟನಾ ಸಮಾರಂಭ ಶನಿವಾರ ಅದ್ದೂರಿಯಾಗಿ ನಡೆಯಿತು. ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ಲವ್ಲಿನಾ ಬೊರ್ಗೊಹೇನ್ ಉದ್ಘಾಟನ ಸಮಾರಂಭದಲ್ಲಿ ಭಾರತದ ಜಂಟಿ ಧ್ವಜಧಾರಿಗಳಾಗಿ ಮಿಂಚಿದರು. ಬಿಗ್ ಲೋಟಸ್’ ಎಂದು ಕರೆಯಲ್ಪಡುವ, 80 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ, ಕ್ವಿಂಟಾಂಗ್ ನದಿ ತೀರದ “ಹ್ಯಾಂಗ್‌ಝೂ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂ’ನಲ್ಲಿ ವರ್ಣ ರಂಜಿತ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಹಾಕಿ ರ್‍ಯಾಂಕಿಂಗ್: ಎಫ್‌ಐಎಚ್ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿಕೆ
ಭಾರತದ 655 ಕ್ರೀಡಾಪಟುಗಳು ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಇದು ಏಷ್ಯಾಡ್ ಇತಿಹಾಸದಲ್ಲೇ ಭಾರತದ ಗರಿಷ್ಠ ಸಂಖ್ಯೆಯ ಕ್ರೀಡಾಳುಗಳ ದಾಖಲೆಯಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತದ ಕ್ರೀಡಾಳುಗಳು ವನಿತೆಯರು ಖಾಕಿ ವಿನ್ಯಾಸದ ಆಕರ್ಷಕ ಸೀರೆ ಮತ್ತು ಪುರುಷರು ಅದೇ ಬಣ್ಣದ ಕುರ್ತಾ ಧರಿಸಿದ್ದರು. ಉದ್ಘಾಟನಾ ಸಮಾರಂಭ ಕಲಾತ್ಮಕ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು. ಪ್ರಮುಖ ಅತಿಥಿಗಳ ನಡುವೆ ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್, ವೇದಿಕೆಯಲ್ಲಿದ್ದರು. ಏಷ್ಯನ್ ಗೇಮ್ಸ್ ಆಯೋಜನಾ ಸಮಿತಿಯ ಅಧ್ಯಕ್ಷ ಗಾವೊ ಜಿಡಾನ್ ಮಾತನಾಡಿದರು.
An enchanting sight as the Indian contingent take the march at the Opening Ceremony of #AsianGames2022 with unmatched confidence.
The nation's best wishes are with them
I am confident that every athlete will give their best and make Bharat proud at #AsianGames2022… pic.twitter.com/BmVR5cDFfM
— Anurag Thakur (@ianuragthakur) September 23, 2023
ಇನ್ನು ಈ ಬಾರಿಯ ಕ್ರೀಡಾಕೂಟದಲ್ಲಿ ಒಟ್ಟು 45 ದೇಶಗಳ 12 ಸಾವಿರಕ್ಕೂ ಕ್ರೀಡಾಪಟುಗಳು ಕಾಣಿಸಿಕೊಂಡಿದ್ದಾರೆ. ಈ ಕ್ರೀಡಾಪಟುಗಳು 40 ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದು, ಈ ಮೂಲಕ ಚಿನ್ನದ ಪದಕಕ್ಕಾಗಿ ಪೈಪೋಟಿ ನಡೆಸಲಿದ್ದಾರೆ. ಹಾಗೆಯೇ ಭಾರತದ 655 ಕ್ರೀಡಾಪಟುಗಳು ಈ ಬಾರಿ ಕಣದಲ್ಲಿದ್ದು, ಅತ್ಯುತ್ತಮದ ಪ್ರದರ್ಶನವನ್ನು ನಿರೀಕ್ಷಿಸಬಹುದು. ಈ ಬಾರಿಯ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಸೆಪ್ಟೆಂಬರ್ 19 ರಿಂದ ಶುರುವಾಗಿದೆ. ಅಂದರೆ ಆರಂಭದಲ್ಲಿ ಕೆಲ ಪಂದ್ಯಗಳ ಅರ್ಹತಾ ಸುತ್ತುಗಳು ನಡೆದಿದ್ದು, ಕೆಲ ಪಂದ್ಯಗಳನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಗಾಲ್ಫ್ ಆಡಿದ ಎಂಎಸ್ ಧೋನಿ!
ಇದೀಗ ಉದ್ಘಾಟನಾ ಕಾರ್ಯಕ್ರಮದ ಮೂಲಕ ಎಲ್ಲಾ ಕ್ರೀಡಾಕೂಟಗಳಿಗೂ ಚಾಲನೆ ನೀಡಲಾಗಿದೆ. 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ 2022 ರಲ್ಲಿ ಆಯೋಜಿಸಬೇಕಿತ್ತು. ಆದರೆ ಕೊರೋನಾ ಭೀತಿ ಹಿನ್ನಲೆಯಲ್ಲಿ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಕ್ರೀಡಾಕೂಟವನ್ನು ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಚೀನಾದ ಹಾಂಗ್ಝೌನಲ್ಲಿ ಏಷ್ಯನ್ ಗೇಮ್ಸ್ ನಡೆಯುತ್ತಿದೆ.