Breaking: Farm Laws ಮೂರು ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೇಂದ್ರ ಸರ್ಕಾರವು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದೆ. ವ್ಯಾಪಕ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.

Breaking: Farm Laws ಮೂರು ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ಮೋದಿ ಮಹತ್ವದ ಘೋಷಣೆ
Linkup
ಹೊಸದಿಲ್ಲಿ: ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ಕಾರಣವಾಗಿದ್ದ ವಿವಾದಾತ್ಮಕ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಮೂರು ಕಾಯ್ದೆಗಳನ್ನು ರದ್ದುಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಮೂರು ಕೃಷಿ ಕಾಯ್ದೆಗಳು ಸಣ್ಣ ರೈತರನ್ನು ಸಬಲೀಕರಣಗೊಳಿಸಲಿವೆ. ಇವುಗಳನ್ನು ಕೃಷಿ ವಲಯದಲ್ಲಿ ಮತ್ತಷ್ಟು ಸುಧಾರಣೆಗಾಗಿ ಜಾರಿಗೊಳಿಸಲಾಗಿದೆ. ಹಿಂದಿನ ಸರ್ಕಾರಗಳೂ ಕೃಷಿ ಕಾಯ್ದೆಗಳ ಬಗ್ಗೆ ಚಿಂತನೆ ನಡೆಸಿದ್ದವು. ದೇಶದ ಮೂಲೆ ಮೂಲೆಗಳಲ್ಲಿ ಕೃಷಿಯಲ್ಲಿ ತೊಡಗಿರುವ ಎಲ್ಲರೂ ಈ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ನಮ್ಮ ಕೈಲಾದ ಪ್ರಯತ್ನದ ಬಳಿಕವೂ ಕೆಲವು ರೈತರು ಈ ಕಾಯ್ದೆಗಳ ಬಗ್ಗೆ ತಪ್ಪು ತಿಳಿದುಕೊಂಡಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.