HBD Shiva Rajkumar: ಜನ್ಮದಿನದ ಸಡಗರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗಿಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ 59ನೇ ಜನ್ಮದಿನವನ್ನು ಇಂದು ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ.

HBD Shiva Rajkumar: ಜನ್ಮದಿನದ ಸಡಗರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್
Linkup
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗಿಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ 59ನೇ ಜನ್ಮದಿನವನ್ನು ಇಂದು ಸೆಂಚುರಿ ಸ್ಟಾರ್ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇರಲ್ಲ ಎಂದಿದ್ದ ಶಿವಣ್ಣ ''ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ದೇವರ ದಯೆಯಿಂದ ಕೊರೊನಾ ಕಡಿಮೆ ಆಗಿದೆ. ಹಾಗಂತ ನಾವು ಎಚ್ಚರಿಕೆಯಿಂದ ಇರಬೇಕಾದ ಸಮಯ ಇನ್ನೂ ಮುಗಿದಿಲ್ಲ. ಮುಂದೆ ಇನ್ನೂ ಎಚ್ಚರಿಕೆಯಿಂದ ಇರಬೇಕು. ಜುಲೈ 12ರಂದು ನನ್ನ . ಕೆಲವು ಕಾರಣಗಳಿಂದ ಅಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ನಿಮಗೆಷ್ಟು ಬೇಜಾರು ಆಗುತ್ತಿದ್ಯೋ, ನನಗೂ ಅಷ್ಟೇ ಬೇಜಾರು ಆಗುತ್ತಿದೆ. ನಿಮ್ಮ ಶುಭಾಶಯಗಳನ್ನು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿ.. ನಿಮ್ಮ ವಿಶಸ್, ಪ್ರೀತಿ, ಪ್ರೋತ್ಸಾಹ ಹಾಗೂ ಆಶೀರ್ವಾದ ನನ್ನ ಜೊತೆಗೆ ಯಾವಾಗಲೂ ಇರಬೇಕು. ಅದನ್ನೇ ನಾನು ಬಯಸುವುದು'' ಎಂದು ಇತ್ತೀಚೆಗಷ್ಟೇ ನಟ ಶಿವರಾಜ್‌ಕುಮಾರ್ ಹೇಳಿದ್ದರು. ಇಂದಿನ ವಿಶೇಷ ಏನೇನು? 'ಕರುನಾಡ ಚಕ್ರವರ್ತಿ' ಶಿವರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಂದು ಅವರ 123ನೇ ಚಿತ್ರದ ಟೈಟಲ್ ರಿವೀಲ್ ಆಗಲಿದೆ. ವಿಜಯ್ ಮಿಲ್ಟನ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಶಿವಣ್ಣ ಜೊತೆಗೆ ಧನಂಜಯ್ ಮತ್ತು ಪೃಥ್ವಿ ಅಂಬರ್ ಕೂಡ ನಟಿಸಿದ್ದಾರೆ. ಶಿವರಾಜ್‌ಕುಮಾರ್ ಜನ್ಮದಿನದ ಪ್ರಯುಕ್ತ ಇಂದು ಅವರ 'ಭಜರಂಗಿ 2' ಚಿತ್ರದ ಬರ್ತಡೇ ಸ್ಪೆಷಲ್ ಟೀಸರ್ ಬಿಡುಗಡೆಯಾಗಲಿದೆ. ಹಾಗೇ, ಶಿವರಾಜ್‌ಕುಮಾರ್ ರವರ ಮುಂದಿನ ಪ್ರಾಜೆಕ್ಟ್‌ಗಳ ಘೋಷಣೆಯೂ ಇಂದೇ ಆಗಲಿದೆ. ಅಂದ್ಹಾಗೆ, ಅಭಿಮಾನಿಗಳು ಇಂದು ವಿವಿದೆಡೆ ಅನ್ನದಾನ ಮಾಡುವ ಮೂಲಕ ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಿದ್ದಾರೆ.