Kannada Flag: ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಶಿವಣ್ಣ, ಜಗ್ಗೇಶ್ ಕೆಂಡಾಮಂಡಲ

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ಕನ್ನಡಿಗರನ್ನು ಕೆರಳಿಸಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟ ಘಟನೆಯನ್ನು ಖಂಡಿಸಿ ಕರ್ನಾಟಕದ ಹಲವೆಡೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೀಗ ಇದೇ ಘಟನೆ ಕುರಿತಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

Kannada Flag: ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಶಿವಣ್ಣ, ಜಗ್ಗೇಶ್ ಕೆಂಡಾಮಂಡಲ
Linkup
ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ಕನ್ನಡಿಗರನ್ನು ಕೆರಳಿಸಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟ ಘಟನೆಯನ್ನು ಖಂಡಿಸಿ ಕರ್ನಾಟಕದ ಹಲವೆಡೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೀಗ ಇದೇ ಘಟನೆ ಕುರಿತಂತೆ ಹ್ಯಾಟ್ರಿಕ್ ಹೀರೋ ಹಾಗೂ ನಟ ಕಿಡಿಕಾರಿದ್ದಾರೆ. ಶಿವರಾಜ್‌ ಕುಮಾರ್ ಹೇಳಿದ್ದೇನು? ‘’ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಟ ಶಿವರಾಜ್‌ ಕುಮಾರ್ ಬರೆದುಕೊಂಡಿದ್ದಾರೆ. ಹಾಗೇ, ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಿ ಎಂದೂ ಶಿವರಾಜ್ ಕುಮಾರ್ ಆಗ್ರಹಿಸಿದ್ದಾರೆ. ಜೊತೆಗೆ ಡಾ.ರಾಜ್‌ಕುಮಾರ್ ನಾಡ ಧ್ವಜವನ್ನು ಹಿಡಿದಿರುವ ಫೋಟೋವನ್ನೂ ನಟ ಶಿವರಾಜ್ ಕುಮಾರ್ ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ನಟ ಜಗ್ಗೇಶ್ ಏನಂದರು? ‘’ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ. ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ’’ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್‌ರಾಮ್ ‘’ಕನ್ನಡ ಕಲಿಗಳನ್ನು ಬಿಡುಗಡೆ ಮಾಡಿ.. ನಮ್ಮ ಭಾಷೆ, ನಾಡು, ನೀರಿನ ಪರ ಧ್ವನಿಯಾಗುವುದು ನಮ್ಮ ಕರ್ತವ್ಯ. ಗಡಿಭಾಗದ ಕನ್ನಡಿಗರು ಹುಲಿಗಳು. ಜೈ ಹಿಂದ್ ಜೈ ಕರ್ನಾಟಕ ಮಾತೆ. ಬೆಳಗಾವಿ ಕರ್ನಾಟಕದ ಕಳಶ’’ ಎಂದು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಟ್ವೀಟಿಸಿದ್ದಾರೆ. ಕಾರ್ತಿಕ್ ಗೌಡ ಟ್ವೀಟ್ ‘’ಕನ್ನಡ ಹೋರಾಟಗಾರರನ್ನು ಬಿಡುಗಡೆ ಮಾಡಿ, ಸಮಸ್ಯೆಯ ತಿರುಳನ್ನು ನೋಡಿ’’ ಎಂದು ಕಾರ್ತಿಕ್ ಗೌಡ ಕೂಡ ಟ್ವೀಟ್ ಮಾಡಿದ್ದಾರೆ. ದುನಿಯಾ ವಿಜಯ್ ''ನಾಡು, ನುಡಿ, ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ'' ‘’ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ’’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಒತ್ತಾಯಿಸಿದ್ದಾರೆ. ಕನ್ನಡ ಧ್ವಜ ಸುಟ್ಟ ಘಟನೆಯ ಹಿನ್ನೆಲೆ ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವ ಆಯೋಜಿಸಿತ್ತು. ಈ ಸಂದರ್ಭದಲ್ಲಿ ನಡೆದ ಜಟಾಪಟಿಯಲ್ಲಿ ಎಂಇಎಸ್ ಮುಖಂಡರಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದಿದ್ದರು. ಇದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನಡ ಧ್ವಜವನ್ನು ಸುಟ್ಟು ಹಾಕಿದರು. ನಾಡ ಧ್ವಜವನ್ನು ಸುಟ್ಟ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಯಿತು. ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.