Karnataka Election 2023 : ಅಶೋಕ್‌,ಎಂಟಿಬಿ, ಅಶ್ವತ್ಥನಾರಾಯಣ ಸೇರಿ ಬೆಂಗಳೂರಿನ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಮತ್ತೆ ಯಾರೆಲ್ಲಾ ಇದ್ದಾರೆ?

ಬೆಂಗಳೂರು : ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಸೋಮವಾರ ಘಟಾನುಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು. ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್‌. ಅಶೋಕ್, ರವಿ ಸುಬ್ರಹ್ಮಣ್ಯ, ಎಸ್‌ಟಿ ಸೋಮಶೇಖರ್, ಕೆ. ಗೋಪಾಲಯ್ಯ, ಭಾಸ್ಕರ್‌ ರಾವ್, ಅಶ್ವತ್ಥ ನಾರಾಯಣ ನಾಮಪತ್ರ ಸಲ್ಲಿಕೆ ಮಾಡಿದರು. ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಮುನಿರತ್ನ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್‌ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಇಬ್ಬರು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಯಂತ್ರಣ ಮಾಡಲು ಹರಸಾಹಸ ಪಡಬೇಕಾಯಿತು.ಕಂದಾಯ ಸಚಿವ ಆರ್‌. ಅಶೋಕ್ ಅಪಾರ ಬೆಂಬಲಿಗರ ಜೊತೆಗೆ ತೆರಳಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದರು. ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Linkup