NEW YEAR 2023: ಡಿ.31ರ ರಾತ್ರಿ ಖಾಕಿ ಹದ್ದಿನ ಕಣ್ಣು: ಮೇಲ್ಸೇತುವೆ ಸಂಚಾರ ಬಂದ್‌

ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 31ಕ್ಕೆ ರಾತ್ರಿ 9 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗುತ್ತದೆ. ಇನ್ನು ಪಾನಮತ್ತರಾಗಿ ವಾಹನ ಚಾಲನೆ ಮಾಡುವವರ ಪತ್ತೆಗೆ ಡಿ.31ರಂದು ರಾತ್ರಿ ನಗರದೆಲ್ಲೆಡೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ, ವಾಹನ ಜಪ್ತಿ ಮಾಡಲಾಗುತ್ತದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಡಾ.ಎಂ.ಎ.ಸಲೀಂ ಎಚ್ಚರಿಕೆ ನೀಡಿದ್ದಾರೆ. ವೀಲಿಂಗ್‌ ಮತ್ತು ಡ್ರಾಗ್‌ ರೇಸ್‌ ಮಾಡುವವರ ವಿರುದ್ಧವೂ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Linkup