Omicron variant: ಮುಂಬಯಿನಲ್ಲಿ 144 ಸೆಕ್ಷನ್​ ಜಾರಿ, ವಿಕೇಂಡ್‌ನಲ್ಲಿ ಕಠಿಣ ನಿರ್ಬಂಧ!

ಮಹಾರಾಷ್ಟ್ರದ ಮುಂಬಯಿ ನಗರದಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವೀಕೆಂಡ್​ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಈ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದಲ್ಲಿ 17 ಒಮಿಕ್ರಾನ್‌ ಸೋಂಕಿತರು ಪತ್ತೆಯಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Omicron variant: ಮುಂಬಯಿನಲ್ಲಿ 144 ಸೆಕ್ಷನ್​ ಜಾರಿ, ವಿಕೇಂಡ್‌ನಲ್ಲಿ ಕಠಿಣ ನಿರ್ಬಂಧ!
Linkup
ಮುಂಬಯಿ: ದೇಶದಲ್ಲಿ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿದೆ. ವಿದೇಶಗಳಿಂದ ಬರುತ್ತಿರುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಈ ಮಧ್ಯೆ ಆಯಾ ರಾಜ್ಯಗಳು ಕೂಡ ನಿರ್ಬಂಧಗಳನ್ನು ಹೇರುತ್ತಿದೆ. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ನಗರದಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವೀಕೆಂಡ್ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಈ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದಲ್ಲಿ 17 ಒಮಿಕ್ರಾನ್‌ ಸೋಂಕಿತರು ಪತ್ತೆಯಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮುಂಬಯಿನ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದ್ದು, ಇಂದು(ಶನಿವಾರ) ಮತ್ತು ನಾಳೆ ಅಂದರೆ ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು, ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಇನ್ನು ಮುಂಬಯಿನಲ್ಲಿ ಹೊರಡಿಸಲಾದ ನಿಷೇಧಾಜ್ಞೆಗಳನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 188 ಮತ್ತು ಇತರ ಕಾನೂನು ನಿಬಂಧನೆಗಳ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಕಾರಣ ಏನು? ಮೂಲಗಳ ಪ್ರಕಾರ ವಿಕೇಂಡ್‌ನಲ್ಲಿ ಜನರು ಗುಂಪುಗೂಡುವುದು ಮುಂಬಯಿನಂತ ಮಾಯನಗರಿಯಲ್ಲಿ ಜಾಸ್ತಿ. ಹೀಗಾಗಿ ಇದನ್ನು ತಪ್ಪಿಸಲು ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಅಲ್ಲದೇ ಅಸಾದುದ್ದೀನ್‌ ಒವೈಸಿ ನೇತೃತ್ವದ ಎಂಐಎಂ ಪಕ್ಷವು ವಾರಾಂತ್ಯದಲ್ಲಿ ಭಾರೀ ದೊಡ್ಡ ಸಮಾವೇಶ ಹಮ್ಮಿಕೊಳ್ಳಲು ಮುಂದಾಗಿದಂತೆ. ಇಲ್ಲಿ ಕೂಡ ಜನರು ಸೇರುವುದರಿಂದ ಸೋಂಕು ಹರಡುವ ಭೀತಿ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಬಿಜೆಪಿ ಕೂಡ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆ ಈ ಕ್ರಮಕೈಗೊಂಡಿದೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ಹೇಗಿದೆ ಕೊರೊನಾ ಸ್ಥಿತಿ? ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 695 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 12 ಸಾವುಗಳು ವರದಿಯಾಗಿವೆ. ಹೊಸ ಸೋಂಕಿನೊಂದಿಗೆ, ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,534ಕ್ಕೆ ಏರಿದೆ.ಇಲ್ಲಿಯವರೆಗೆ ಒಟ್ಟು 66,42,372 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕಂಡುಬಂದ ಒಮಿಕ್ರಾನ್ ರೂಪಾಂತರದ ಸೋಂಕಿನ ಸಂಖ್ಯೆ 17 ಕ್ಕೆ ಏರಿದೆ. ಇನ್ನು ಮಹಾರಾಷ್ಟ್ರದಲ್ಲಿ ಮೂರು ವರ್ಷದ ಮಗುವಿಗೆ ಒಮಿಕ್ರಾನ್‌ ಸೋಂಕು ದೃಢಪಟ್ಟಿದೆ.