Puchal Terrorist Encounter: ಪುಲ್ವಾಮಾ: ಕಳೆದ 24 ಗಂಟೆಯಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Jammu Kashmir Encounter: ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ. ಯಾವುದೇ ಹಾನಿಯಾಗದ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿಗೆ ಅಭಿನಂದನೆಗಳು ಎಂದು ಜಮ್ಮು ಕಾಶ್ಮೀರ ವಿಭಾಗದ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Puchal Terrorist Encounter: ಪುಲ್ವಾಮಾ: ಕಳೆದ 24 ಗಂಟೆಯಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Linkup
ಪುಲ್ವಾಮಾ: ಮತ್ತು ಉಗ್ರರ ನಡುವೆ ನಡೆದ ಕಾಳಗದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿರುವುದಾಗಿ ಝೋನ್ ಪೊಲೀಸರು ಅಧಿಕೃತವಾಗಿ ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಪುಚಲ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿಯಾಗಿದ್ದು, ಈ ಪ್ರದೇಶದಲ್ಲಿ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಪುಚಲ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇನ್ನು ಇಬ್ಬರು ಉಗ್ರರು ಭದ್ರತಾ ಪಡೆಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆ ಸಿಬ್ಬಂದಿ, ಉಗ್ರರನ್ನು ಮಟ್ಟಹಾಕಿರುವ ಸಂಬಂಧ ಅಭಿನಂದನೆ ಸಲ್ಲಿಸಿರುವ ಜಮ್ಮು ಕಾಶ್ಮೀರ ವಿಭಾಗದ ಐಜಿ ವಿಜಯ್ ಕುಮಾರ್, ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ. ಯಾವುದೇ ಹಾನಿಯಾಗದ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.