Puneeth Rajkumar: ಪಾರ್ಥಿವ ಶರೀರ ಅಂತಿಮ ದರ್ಶನದ ಸಿದ್ಧತೆ: ಸಚಿವ ನಾರಾಯಣ ಗೌಡ ಪರಿಶೀಲನೆ

ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ಸಚಿವ ನಾರಾಯಣ ಗೌಡ ಅವರು ಸಿದ್ಧತೆ ಪರಿಶೀಲಿಸಿದರು.

Puneeth Rajkumar: ಪಾರ್ಥಿವ ಶರೀರ ಅಂತಿಮ ದರ್ಶನದ ಸಿದ್ಧತೆ: ಸಚಿವ ನಾರಾಯಣ ಗೌಡ ಪರಿಶೀಲನೆ
Linkup
ಬೆಂಗಳೂರು: ಹೃದಯಾಘಾತದಿಂದ ಶುಕ್ರವಾರ ನಿಧನರಾದ ಸಿನಿಮಾ ನಟ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ಸಿದ್ಧತೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಚಿವ ತೆರಳಿ ಪರಿಶೀಲನೆ ನಡೆಸಿದರು. ಕೊಪ್ಪಳ ಪ್ರವಾಸ ಮೊಟಕುಗೊಳಿಸಿ ತುರ್ತು ಬೆಂಗಳೂರಿಗೆ ವಾಪಸ್ಸಾದ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಕಂಠೀರವ ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಅಧಿಕಾರಿಗಳ ಜೊತೆ ಸಿದ್ದತೆ ಬಗ್ಗೆ ಚರ್ಚೆ ನಡೆಸಿದರು.‌ ಚಿತ್ರನಟ ಪುನೀತ್ ರಾಜ್‍ಕುಮಾರ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದೀಗ ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಶನಿವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಚಿವ ನಾರಾಯಣ ಗೌಡ ವ್ಯವಸ್ಥೆ ಪರಿಶೀಲನೆ ನಡೆಸಿದರು. ಲಿಕ್ಕರ್ ಶಾಪ್ ಮುಚ್ಚಲು ಆದೇಶ ಸಿನಿಮಾ ನಟ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಲ್ಲಾ ಲಿಕ್ಕರ್ ಶಾಪ್ ಮುಚ್ಚಲು ಅಬಕಾರಿ ಇಲಾಖೆ ಆದೇಶ ಮಾಡಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ಬಾರ್ ಗಳನ್ನು ಬಂದ್ ಮಾಡಲು ಆದೇಶ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಬಾರ್ ಮುಚ್ಚಲು ಅಬಕಾರಿ ಆಯುಕ್ತರು ಈ ಆದೇಶವನ್ನು ಹೊರಡಿಸಿದ್ದಾರೆ. ಶನಿವಾರ ಮಧ್ಯರಾತ್ರಿ ವರೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ನಗರದ ಬಹುತೇಕ ಶಾಲಾ ಕಾಲೇಜುಗಳಲ್ಲಿನ ತರಗತಿಗಳನ್ನು ಶುಕ್ರವಾರ ಮಧ್ಯಾಹ್ನ ಮೊಟಕುಗೊಳಿಸಲಾಗಿದೆ. ಶನಿವಾರ ಕೂಡ ಅನೇಕ ಕಡೆ ರಜೆ ಘೋಷಿಸಲಾಗಿದೆ. ಶನಿವಾರ ನಡೆಯಬೇಕಿದ್ದ ಬೆಂಗಳೂರು ಸಿಟಿ ವಿವಿಯ ಎಂಬಿಎ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯು ಮಂಗಳವಾರ ನಡೆಯಲಿದೆ.