Roshan Baig: ಶಿವಾಜಿನಗರದಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ಇ.ಡಿ ದಾಳಿ

ಬೆಂಗಳೂರಿನ ಶಿವಾಜಿನಗರದಲ್ಲಿರುವ ಕಾಂಗ್ರೆಸ್ ನಾಯಕ ರೋಷನ್ ಬೇಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Roshan Baig: ಶಿವಾಜಿನಗರದಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ಇ.ಡಿ ದಾಳಿ
Linkup
ಬೆಂಗಳೂರು: ನಗರದಲ್ಲಿ ಎರಡು ತನಿಖಾ ಸಂಸ್ಥೆಗಳು ಕಾಂಗ್ರೆಸ್‌ನ ಇಬ್ಬರು ಮುಖಂಡರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿವೆ. ಮಾಜಿ ಸಚಿವ ಅವರಿಗೆ ಆಘಾತ ನೀಡಿದೆ. ಶಿವಾಜಿನಗರದಲ್ಲಿರುವ ರೋಷನ್ ಬೇಗ್ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಅವರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿರುವ ನಡುವೆಯೇ, ರೋಷನ್ ಬೇಗ್ ಅವರ ಮನೆ ಮೇಲೆ ನಡೆದಿದೆ. ದೆಹಲಿಯ ಸುಮಾರು ನೂರು ಅಧಿಕಾರಿಗಳ ತಂಡವು ರೋಷನ್ ಬೇಗ್ ನಿವಾಸ, ಅವರ ಕಚೇರಿ, ರೋಷನ್ ಬೇಗ್ ಮಗಳು ಸಬೀಹಾ ಫಾತೀಮಾ ಮನೆ ಸೇರಿದಂತೆ ಅವರ ಆಪ್ತರಿಗೆ ಸೇರಿದ ಒಟ್ಟು ಆರು ಕಡೆ ದಾಳಿ ನಡೆಸಲಾಗಿದೆ. ಸಿಆರ್‌ಪಿಎಫ್ ಭದ್ರತೆಯಲ್ಲಿ ಪರಿಶೀಲನೆ ನಡಸಲಾಗುತ್ತಿದೆ. ಶಿವಾಜಿನಗರದಲ್ಲಿರುವ ರೋಷನ್ ಬೇಗ್ ಅವರ ನಿವಾಸದಲ್ಲಿ ಇ.ಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ರೋಷನ್ ಬೇಗ್ ಅವರು ಐಎಂಎ ವಂಚನೆ ಹಗರಣದಲ್ಲಿ ಸಿಲುಕಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ಸಕ್ಷಮ ಪ್ರಾಧಿಕಾರದ ಪ್ರಮಾಣ ಪತ್ರದಲ್ಲಿ ರೋಷನ್ ಬೇಗ್ ಅವರ ಆಸ್ತಿಯ ವಿವರಗಳಿವೆ. ಆಸ್ತಿಯ ಬಗ್ಗೆ ಸ್ಪಷ್ಟ ವಿವರ ಲಭ್ಯವಾದ ಬಳಿಕ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯಡಿ ಜಪ್ತಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಆಸ್ತಿ ಪರಭಾರೆ ಮಾಡುವ ಮುನ್ನ ಹೈಕೋರ್ಟ್ ಗಮನಕ್ಕೆ ತರಲಾಗುವುದು ಎಂದು ಜೂನ್‌ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರಕಾರ ತಿಳಿಸಿತ್ತು. ಬಳಿಕ ಜುಲೈ 6ರಂದು ಕೆಪಿಐಡಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ, ರೋಷನ್ ಬೇಗ್ ಅವರ ಚರ ಮತ್ತು ಸ್ಥಿರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಲಾಗಿದೆ ಎಂದು ಹೇಳಿತ್ತು. ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. 2018ರಲ್ಲಿ ರೋಷನ್ ಬೇಗ್ ಒಡೆತನದ ಕಂಪೆನಿಯು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.