Twitter India ಮುಖ್ಯಸ್ಥರ ವಿರುದ್ಧ ಕೇಸ್: ಉತ್ತರ ಪ್ರದೇಶ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ತರಾಟೆ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಹಲ್ಲೆ ಪ್ರಕರಣದ ವಿಡಿಯೋಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥರಿಗೆ ಸಮನ್ಸ್ ನೀಡಿದ್ದ ಪೊಲೀಸರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

Twitter India ಮುಖ್ಯಸ್ಥರ ವಿರುದ್ಧ ಕೇಸ್: ಉತ್ತರ ಪ್ರದೇಶ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ತರಾಟೆ
Linkup
ಬೆಂಗಳೂರು: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಮುಖ್ಯಸ್ಥ ಅವರಿಗೆ ರಕ್ಷಣೆ ನೀಡಿದೆ. ಹಲ್ಲೆ ಘಟನೆಯ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಪೊಲೀಸರು ಸಮನ್ಸ್ ನೀಡಿದ್ದರು. ಆದರೆ ಅದಕ್ಕಾಗಿ ಅವರು ಉತ್ತರ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮನೀಶ್ ಅವರಿಗೆ ನೋಟಿಸ್ ನೀಡಿ, ಅವರ ವಿರುದ್ಧ ಗಲಭೆ ಉದ್ದೇಶ, ವೈರತ್ವ ಪ್ರಚಾರ ಮತ್ತು ಅಪರಾಧ ಸಂಚಿನ ಪ್ರಕರಣಗಳನ್ನು ದಾಖಲಿಸಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಪ್ರಕರಣಗಳು ದುರುದ್ದೇಶಪೂರ್ವಕವಾಗಿವೆ ಮತ್ತು ಕಿರುಕುಳದ ಸಾಧನ ಹಾಗೂ ಒತ್ತಡಕ್ಕೆ ಮಣಿದು ಮಾಡಿರುವುದಾಗಿದೆ ಎಂದು ಹೇಳಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಕೋಮು ಘಟನೆ ಎಂದು ಅನೇಕರು ಆರೋಪಿಸಿ ಟ್ವಿಟ್ಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಆದರೆ ಟ್ವಿಟ್ಟರ್‌ನಲ್ಲಿ ಘಟನೆಯ ಕುರಿತು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಆದರೂ ಅಂತಹ ಪೋಸ್ಟ್‌ಗಳನ್ನು ತೆರವುಗೊಳಿಸಿಲ್ಲ ಎಂದು ಆರೋಪಿಸಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಜತೆಗೆ ಕೆಲವು ಪತ್ರಕರ್ತರು ಮತ್ತು ಕಾಂಗ್ರೆಸ್ ಮುಖಂಡರ ವಿರುದ್ಧ ಕೂಡ ಎಫ್‌ಐಆರ್ ದಾಖಲಿಸಲಾಗಿತ್ತು. ಲೋನಿ ಪೊಲೀಸ್ ಠಾಣೆಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ನೀಡಿದ್ದ ನೋಟಿಸ್ ಅನ್ನು ಮನೀಶ್ ಅವರು ಜೂನ್ 23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಿಡಿಯೋ ಕಾಲ್ ಮೂಲಕ ವಿಚಾರಣೆಗೆ ಹಾಜರಾಗಲು ಸಿದ್ಧ ಎಂದು ಮನೀಶ್ ಹೇಳಿದ್ದರು.