ಅಗತ್ಯ ಬಿದ್ದರೆ ಅವರದ್ದೇ ನೆಲಕ್ಕೆ ನುಗ್ಗಿ ಹೊಡೆಯುತ್ತೇವೆ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ
ಅಗತ್ಯ ಬಿದ್ದರೆ ಅವರದ್ದೇ ನೆಲಕ್ಕೆ ನುಗ್ಗಿ ಹೊಡೆಯುತ್ತೇವೆ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ
ಭಾರತವನ್ನು ಗುರಿಯಾಗಿಸಿಕೊಂಡು ಉಗ್ರರಿಗೆ ತರಬೇತಿ, ಹಣ, ಶಸ್ತ್ರಾಸ್ತ್ರ ಪೂರೈಸುತ್ತಿರುವ ಪಾಕಿಸ್ತಾನದ ವಿರುದ್ಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ. ಕೇವಲ ನಮ್ಮ ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಮಟ್ಟ ಹಾಕಲ್ಲ. ಅವಶ್ಯಕತೆ ಬಿದ್ದರೆ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಊಟಿ (ತಮಿಳುನಾಡು): ಭಾರತ ಕೇವಲ ತನ್ನ ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಮಟ್ಟ ಹಾಕಲ್ಲ. ಅವಶ್ಯಕತೆ ಬಿದ್ದರೆ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ರಕ್ಷಣಾ ಸಚಿವ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿನ ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉಗ್ರರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿ ನೀಡುವ ಮೂಲಕ ಭಾರತವನ್ನು ಟಾರ್ಗೆಟ್ ಮಾಡಿದೆ. ನಮ್ಮ ಗಡಿಯಲ್ಲಿನ ಸವಾಲುಗಳನ್ನು ಹೊರತಪಡಿಸಿ, ಭಾರತದ ರಾಷ್ಟ್ರೀಯ ಭದ್ರತೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ.
ಭಾರತದ ವಿರುದ್ಧ ಎರಡು ಯುದ್ಧಗಳನ್ನು ಸೋತ ಬಳಿಕ ಪಾಕಿಸ್ತಾನ ಛಾಯಾ ಸಮರಕ್ಕೆ ಮುಂದಾಗಿದ್ದು, ಭಯೋತ್ಪಾದನೆಯನ್ನು ತನ್ನ ರಾಷ್ಟ್ರೀಯ ನೀತಿಯಲ್ಲಿ ಅಳವಡಿಸಿಕೊಂಡಿದೆ. ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿಯನ್ನು ನೀಡಿ ಭಾರತವನ್ನು ಟಾರ್ಗೆಟ್ ಮಾಡಿದೆ ಎಂದು ನೆರೆ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.
ಇನ್ನು, ಭಾರತ ಕೇವಲ ತನ್ನ ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಅಂತ್ಯಗೊಳಿಸುವುದಿಲ್ಲ. ಅವಶ್ಯಕತೆ ಬಿದ್ದರೆ ಅವರ (ಪಾಕಿಸ್ತಾನದ) ನೆಲದಲ್ಲಿಯೂ ಕಾರ್ಯಾಚರಣೆ ನಡೆಸಿ ಭಯೋತ್ಪಾದರನ್ನು ಹೊಡೆದುರುಳಿಸುತ್ತೇವೆ. ಈ ಮೂಲಕ ನಮ್ಮ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳುತ್ತೇವೆ ಎಂಬ ಎಚ್ಚರಿಕೆ ರವಾನಿಸಿದ್ದಾರೆ.
ನಮ್ಮ ದೇಶವನ್ನು ಟಾರ್ಗೆಟ್ ಮಾಡುತ್ತಿರುವ ಪಾಕಿಸ್ತಾನವನ್ನು ಸೋಲಿಸಿರುವ ಭಾರತೀಯ ರಕ್ಷಣಾ ಪಡೆಗಳಿಗೆ ನಾನು ಗೌರವ ಸಲ್ಲಿಸುತ್ತೇನೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಯಶಸ್ವಿಯಾಗಿದೆಯೆಂದರೆ ಅದು ಭಾರತದ ಸಾಮರ್ಥ್ಯ. 2016ರಲ್ಲಿ ಕದನ ವಿರಾಮ ಉಲ್ಲಂಘನೆ ನಮ್ಮ ಮನಸ್ಥಿತಿಯನ್ನೇ ಬದಲಿಸಿತು. 2019ರ ಬಾಲಾಕೋಟ್ ಏರ್‌ಸ್ಟ್ರೈಕ್ ಬಳಿಕ ನಮ್ಮ ಸಾಮರ್ಥ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.