ಅಂತರ್ಜಲ ಹೆಚ್ಚಳಕ್ಕೆ ಮತ್ತಷ್ಟು ಆದ್ಯತೆ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಮಳೆ ನೀರನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ( ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡನೆ ಮಾಡಲಾಯಿತು.

ಅಂತರ್ಜಲ ಹೆಚ್ಚಳಕ್ಕೆ ಮತ್ತಷ್ಟು ಆದ್ಯತೆ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ
Linkup
ಬೆಂಗಳೂರು: ಮಳೆ ನೀರನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ( ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡನೆ ಮಾಡಲಾಯಿತು. ಮಳೆ ನೀರು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಇರುವ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ತಿದ್ದುಪಡಿ ಮೂಲಕ ಕಾವೇರಿ ನೀರು ಅಥವಾ ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು, ಮಳೆ ನೀರು ಒಳಚರಂಡಿಗಳಲ್ಲಿ ಹರಿದು ಹೋಗುವುದನ್ನು ತಗ್ಗಿಸುವುದು,ನಗರ ಪ್ರವಾಹವನ್ನು ಇಳಿಸುವುದು, ಅಂತರ್ಜಲದ ಮಾಲಿನ್ಯ ಮೂಲವನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ. ಬೆಂಗಳೂರಿನಲ್ಲಿ 30*40 ಸೈಟಿನಲ್ಲಿ ಮನೆ ಕಟ್ಟುವವರಿಗೆ ಇನ್ಮುಂದೆ ಹೊಸ ಷರತ್ತುಗಳನ್ನು ವಿಧಿಸಲಾಗಿದೆ.‌ 30*40 ಚದರಡಿ ಮೇಲ್ಪಟ್ಟ ನಿವೇಶನದಲ್ಲಿ ಮನೆ ಕಟ್ಟೋರಿಗೆ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಲಾಗಿದೆ. 40*60 ಚದರಡಿ ಮೇಲ್ಪಟ್ಟ ನಿವೇಶನದಲ್ಲಿರುವ ಕಟ್ಟಡಗಳಿಗೂ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಲಾಗಿದೆ. ಅಂತರ್ಜಲ ಮಟ್ಟ ಹೆಚ್ಚಳದ ಮೂಲಕ ಬೇಸಿಗೆಯಲ್ಲಿ ನೀರಿನ ಬೇಡಿಕೆಯನ್ನು ನಿರ್ವಹಿಸುವುದು, ಅಂತರ್ಜಲದ ಗುಣಮಟ್ಟವು ಕಳಪೆಯಾಗಿರುವಲ್ಲಿ ಮಳೆ ನೀರು ಕೊಯ್ಲಿನ ಮೂಲಕ ಹೊಸದಾದ ನೀರಿನ ಮೂಲವನ್ನು ಕಲ್ಪಿಸುವುದು ಮತ್ತು ಮಳೆನೀರು ಕೊಯ್ಲನ್ನು ಕಡ್ಡಾಯಗೊಳಿಸೋ ಉದ್ದೇಶವನ್ನು ಈ‌ ತಿದ್ದುಪಡಿ ಹೊಂದಿದೆ. ಮಂಡನೆಯಾದ ಇತರೆ ವಿಧೇಯಕಗಳು
  • ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021
  • ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ವಿಧೇಯಕ, 2021
  • ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕ 2021
  • ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ, 2021
  • ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕ, 2021
  • ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, 2021
  • ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021
  • ಕರ್ನಾಟಕ ಸ್ಟಾಂಪು ತಿದ್ದುಪಡಿ ವಿಧೇಯಕ
  • ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.