ಅನಧಿಕೃತ ವೈದ್ಯಕೀಯ ತರಬೇತಿ ನೀಡುತ್ತಿದ್ದ ಸ್ಪರ್ಶ್ ಆಸ್ಪತ್ರೆಗೆ ಆರೋಗ್ಯ ಇಲಾಖೆ ನೋಟಿಸ್

ಸ್ಕ್ಯಾನಿಂಗ್ ಕೊಠಡಿಯಲ್ಲಿ ಭ್ರೂಣದ ಚಿತ್ರವನ್ನು ದೊಡ್ಡ ಟಿ.ವಿಯಲ್ಲಿ ಬಿತ್ತರಿಸಿ ತೋರಿಸುವ ವ್ಯವಸ್ಥೆ ಮಾಡಲಾಗಿರುವುದು ಕಾನೂನು ಬಾಹಿರವಾಗಿದೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ.

ಅನಧಿಕೃತ ವೈದ್ಯಕೀಯ ತರಬೇತಿ ನೀಡುತ್ತಿದ್ದ ಸ್ಪರ್ಶ್ ಆಸ್ಪತ್ರೆಗೆ ಆರೋಗ್ಯ ಇಲಾಖೆ ನೋಟಿಸ್
Linkup
: ವಿರುದ್ಧ ಫೀಟಲ್ ಮೆಡಿಸನ್ ತರಬೇತಿಯನ್ನು ಸರ್ಕಾರದ ಅನುಮತಿ ಪಡೆಯದೇ ಅನಧಿಕೃತವಾಗಿ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ, ಕೆ. ಎಂ. ಸಿ ನೋಂದಣಿ ಇಲ್ಲದೇ ಇರುವ ಹಲವು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದೂ ಕಂಡುಬಂದಿದೆ. ಈ ಹಿನ್ನೆಲೆ ಬೆಂಗಳೂರು ನಗರದ ಯಶವಂತಪುರದಲ್ಲಿ ಇರುವ ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶ್ರೀನಿವಾಸ್ ತಿಳಿಸಿದ್ದಾರೆ. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಅಧಿ ನಿಯಮ, (ಪಿಸಿಪಿಎನ್ ಡಿಟಿ) 1994ರನ್ವಯ ಮಂಗಳವಾರ ಬೆಂಗಳೂರು ನಗರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು ನಡೆಸಿದ ತಪಾಸಣಾ ಭೇಟಿಯ ನೇತೃತ್ವ ವಹಿಸಿದ ಡಾ. ಶ್ರೀನಿವಾಸ್ ಅವರು ತಪಾಸಣೆ ವೇಳೆ ಈ ವಿಚಾರ ತಿಳಿಸಿದರು. ಒಟ್ಟು 11 ಸ್ಕ್ಯಾನಿಂಗ್ ಯಂತ್ರಗಳನ್ನು ಪರವಾನಗಿ ಪಡೆದು ಬಳಸಲಾಗುತ್ತಿದೆ. ಸ್ಕ್ಯಾನಿಂಗ್ ಮಾಡುವ ಮುನ್ನ ಫಾರಂ ಎಫ್ ಅನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಸಲ್ಲಿಸಿ ನಂತರವೇ ಸ್ಕ್ಯಾನಿಂಗ್ ಮಾಡಬೇಕು. ಆದರೆ, ಇಲ್ಲಿ ಸ್ಕ್ಯಾನಿಂಗ್ ಮಾಡಿದ ನಂತರ ಸಂಜೆ ವೇಳೆಗೆ ಆನ್ ಲೈನ್ ನಲ್ಲಿ ಮಾಹಿತಿ ಅಪ್ ಲೋಡ್ ಮಾಡಲಾಗುತ್ತಿರುವುದು ಕಂಡು ಬಂದಿದೆ. ಅಲ್ಲದೇ, ಸ್ಕ್ಯಾನಿಂಗ್ ಕೊಠಡಿಯಲ್ಲಿ ಭ್ರೂಣದ ಚಿತ್ರವನ್ನು ದೊಡ್ಡ ಟಿ.ವಿಯಲ್ಲಿ ಬಿತ್ತರಿಸಿ ತೋರಿಸುವ ವ್ಯವಸ್ಥೆ ಮಾಡಲಾಗಿರುವುದು ಕಾನೂನು ಬಾಹಿರವಾಗಿದೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದು ಅವರು ತಿಳಿಸಿದರು. ತಪಾಸಣಾ ಭೇಟಿಯಲ್ಲಿ ಸಮಿತಿ ಸದಸ್ಯರಾದ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಬೆಂಗಳೂರು ಉತ್ತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಹಾಗೂ ವಿಝನ್ ಬೆಂಗಳೂರು ಟ್ರಸ್ಟ್‌ನ ವಸಂತ ಕುಮಾರ್ ಅವರು ಉಪಸ್ಥಿತರಿದ್ದರು.