ಅಮಿತಾಬ್ ಬಚ್ಚನ್ ಬಂಗಲೆ, 3 ರೈಲು ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಭಾರಿ ಭದ್ರತೆ

ಮುಂಬಯಿಯ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ನಟ ಅಮಿತಾಬ್ ಬಚ್ಚನ್ ಅವರ ಬಂಗಲೆಗೆ ಬಾಂಬ್ ಬೆದರಿಕೆ ಇರುವ ಬಗ್ಗೆ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.

ಅಮಿತಾಬ್ ಬಚ್ಚನ್ ಬಂಗಲೆ, 3 ರೈಲು ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಭಾರಿ ಭದ್ರತೆ
Linkup
ಮುಂಬಯಿ: ಖ್ಯಾತ ನಟ ಅವರ ಬಂಗಲೆ ಹಾಗೂ ಮೂರು ಪ್ರಮುಖ ರೈಲು ನಿಲ್ದಾಣಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಈ ಸ್ಥಳಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಈ ಸ್ಥಳಗಳಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಪೊಲೀಸರ ಮುಖ್ಯ ಕಂಟ್ರೋಲ್ ರೂಂಗೆ ಶುಕ್ರವಾರ ರಾತ್ರಿ ಫೋನ್ ಕರೆಯೊಂದು ಬಂದಿತ್ತು. ಛತ್ರಪತಿ ಶಿವಾಜಿ ಮಹಾರಾಜ , ಬೈಕುಲ್ಲಾ ಮತ್ತು ದಾದರ್ ರೈಲು ನಿಲ್ದಾಣಗಳಲ್ಲಿ ಹಾಗೂ ಜುಹುನಲ್ಲಿರುವ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಕರೆ ಮಾಡಿದಾತ ಹೇಳಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ಕರೆ ಬಂದ ಕೂಡಲೇ ಸರಕಾರಿ ರೈಲ್ವೆ ಪೊಲೀಸ್, ರೈಲ್ವೆ ರಕ್ಷಣಾ ಪಡೆ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ಸ್ಥಳಗಳಿಗೆ ಧಾವಿಸಿ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈವರೆಗೂ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿರಲಿಲ್ಲ. ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.