ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಕ್ಕೆ ಕಾರಣ ತಿಳಿಸಿ: ಕಾಂಗ್ರೆಸ್'ಗೆ ಕುಮಾರಸ್ವಾಮಿ ಆಗ್ರಹ

ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ. ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಿಸುತ್ತಿರುವ ಕಾಂಗ್ರೆಸ್ ಕಾರಣ ತಿಳಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಅವರ ಪಕ್ಷದ ತೀರ್ಮಾನ ಹೇಳಿದ್ದಾರೆ. ಹೀಗಾಗಿ ಹೋಗದಿರುವುದಕ್ಕೆ ಕಾರಣವನ್ನೂ ಅವರೇ ಹೇಳಬೇಕು ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ದೇಶದ ಜನತೆಯ ಬಹುದಿನಗಳ ಕನಸಾಗಿದೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಭಾರತದ ಹಬ್ಬವಾಗಿದ್ದು, ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾರಣವೇನು ಎಂಬುದುನ್ನು ಕಾಂಗ್ರೆಸ್ ನಾಯಕರು ತಿಳಿಸಬೇಕೆಂದು ತಿಳಿಸಿದರು.
ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರು: ಕಾಂಗ್ರೆಸ್ ನಾಯಕರ ನಿರ್ಧಾರ ಬೆಂಬಲಿಸುತ್ತೇನೆ- ಸಿಎಂ ಸಿದ್ದರಾಮಯ್ಯ
ಇಧೇ ವೇಳೆ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಜೊತೆಗಿನ ಮೈತ್ರಿಗಿಂತ ಬಿಜೆಪಿ ಜೊತೆ ಮೈತ್ರಿಗೆ ಅಜಗಜಾಂತರ ವ್ಯತ್ಯಾಸ ಇದೆ ಎಂದು ಹೇಳಿದರು.
ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ , ಖುಷಿ ಇದೆ, ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ. ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು, ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ, ಕೆಲವೆಡೆ ಸ್ಥಳೀಯವಾಗಿ ಎರಡೂ ಪಕ್ಷಗಳ ನಾಯಕರ ಜೊತೆಗಿನ ಸಮಸ್ಯೆ ಬಗೆಹರಿಸುತ್ತೇವೆಂದು ತಿಳಿಸಿದರು.
ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಸ್ಪರ್ಧಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಜತೆಗಿನ ಸೀಟು ಹಂಚಿಕೆ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು' ಎಂದರು.