ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ; ಸಂಪುಟ ರಚನೆ ಕುರಿತಾಗಿ ಚರ್ಚೆ

ಸಂಪುಟ ರಚನೆ ಚರ್ಚೆ ಬಹುತೇಕ ಅಂತಿಮ ಹಂತದಲ್ಲಿದೆ. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಸಂಪುಟ ಸರ್ಕಸ್ ಕುರಿತಾಗಿ ಚರ್ಚೆ ನಡೆಸಿದ್ದಾರೆ.

ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ; ಸಂಪುಟ ರಚನೆ ಕುರಿತಾಗಿ ಚರ್ಚೆ
Linkup
ಹೊಸದಿಲ್ಲಿ: ಸಂಪುಟ ರಚನೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನೂತನ ಸಿಎಂ ಅವರು ದೆಹಲಿಯಲ್ಲಿದ್ದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದೆಹಲಿಯಲ್ಲಿ ಮಂಗಳವಾರ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ ಅಂತಿಮ ಹಂತದ ಚರ್ಚೆಯನ್ನು ನಡೆಸಿದರು. ಈಗಾಗಲೇ ಸಾಕಷ್ಟು ಮಂದಿ ಆಕಾಂಕ್ಷಿಗಳು ಸಂಪುಟ ಸೇರಲು ಲಾಬಿ ನಡೆಸುತ್ತಿದ್ದಾರೆ. ಕೆಲವರು ದೆಹಲಿ ಮಟ್ಟದಲ್ಲಿ ನಡೆಸಿದರೆ ಮತ್ತೆ ಕೆಲವರು ರಾಜ್ಯ ಮಟ್ಟದಲ್ಲಿ ನಡೆಸುತ್ತಿದ್ದಾರೆ. ಅಂತಿಮ ಹಂತದಲ್ಲಿ ಸಾಕಷ್ಟು ಮಂದಿ ಮಂತ್ರಿಗಿರಿಗಾಗಿ ಪೈಪೋಟಿ ಶುರುಮಾಡಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದರು. ಸದ್ಯದ ಮಾಹಿತಿಯ ಪ್ರಕಾರ ಸಂಪುಟ ರಚನೆ ಬಹುತೇಕ ಮಂಗಳವಾರವೇ ಅಂತಿಮವಾಗುವ ಸಾಧ್ಯತೆ ಇದೆ. ಮಂಗಳವಾರ ಸಂಜೆ ವರಿಷ್ಠರ ಸಭೆಯ ಬಳಿಕ ಲಿಸ್ಟ್ ಫೈನಲ್ ಆಗುವ ಸಾಧ್ಯತೆ ಇದೆ. ಎರಡು ಹಂತದಲ್ಲಿ ಮಾಡುವ ಯೋಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ್ದಾರೆ. ಮೊದಲ ಹಂತದಲ್ಲಿ 24 ಮಂದಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಉಳಿದವರನ್ನು ಎರಡನೇ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಭಿನ್ನಮತ ಶಮನ ಮಾಡುವುದು ಬೊಮ್ಮಾಯಿ ತಂತ್ರಗಾರಿಕೆ. ಆದರೆ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆ ಆಗಲಿದ್ಯಾ ಅಥವಾ ಎರಡು ಹಂತದಲ್ಲಿ ಆಗಲಿದೆಯಾ ಎಂಬುವುದನ್ನು ಹೈಕಮಾಂಡ್ ನಿರ್ಧಾರ ಮಾಡಬೇಕಿದೆ. ಈ ಎಲ್ಲ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆಗೆ ಬೊಮ್ಮಾಯಿ ಮಾತುಕತೆ ಮಹತ್ವ ಪಡೆದುಕೊಂಡಿದೆ.