ಅಲೋಪತಿ ಕುರಿತ ವಿವಾದಾತ್ಮಕ ಹೇಳಿಕೆ: ವಿವಾದಕ್ಕೆ ಪೂರ್ಣ ವಿರಾಮ ಇಡುತ್ತಿದ್ದೇನೆ, ಹೇಳಿಕೆ ಹಿಂಪಡೆದ ರಾಮ್‌ದೇವ್

ಅಲೋಪತಿ ಒಂದು ಅವಿವೇಕದ ವಿಜ್ಞಾನ. ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ಜನರು ಮೃತಪಟ್ಟಿದ್ದಾರೆ ಎಂಬುದಾಗಿ ರಾಮ್‌ದೇವ್ ಹೇಳಿದ್ದರು. ಈ ಹೇಳಿಕೆಯನ್ನು ಸ್ವತಃ ಬಾಬಾ ರಾಮ್‌ದೇವ್‌ ವಾಪಸ್‌ ಪಡೆದುಕೊಂಡಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಅಲೋಪತಿ ಕುರಿತ ವಿವಾದಾತ್ಮಕ ಹೇಳಿಕೆ: ವಿವಾದಕ್ಕೆ ಪೂರ್ಣ ವಿರಾಮ ಇಡುತ್ತಿದ್ದೇನೆ, ಹೇಳಿಕೆ ಹಿಂಪಡೆದ ರಾಮ್‌ದೇವ್
Linkup
ಹೊಸದಿಲ್ಲಿ: ಅಲೋಪಥಿ ಬಗ್ಗೆ ಯೋಗ ಗುರು ಬಾಬಾ ರಾಮ್ ದೇವ್‌ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಸ್ವತಃ ಕೇಂದ್ರ ಆರೋಗ್ಯ ಸಚಿವರೇ ರಾಮ್‌ದೇವ್‌ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಯೋಗ ಗುರು ಕ್ಷಮೆಯಾಚಿಸಿದ್ದು ಅಲ್ಲದೇ ತಾನು ನೀಡಿದ್ದ ಹೇಳಿಕೆಯನ್ನೂ ಹಿಂಪಡೆದಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಬಾಬಾ ರಾಮ್‌ದೇವ್‌ 'ಗೌರವಾನ್ವಿತ ಸಚಿವರೇ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ವೈದ್ಯಕೀಯ ಪದ್ಧತಿ ಕುರಿತ ಹೇಳಿಕೆಯನ್ನು ಹಿಂಪಡೆದುಕೊಳ್ಳುತ್ತೇನೆ'. ಈ ಮೂಲಕ ಈ ಸಂಘರ್ಷಕ್ಕೆ ಪೂರ್ಣ ವಿರಾಮ ಇಡಲು ಇಚ್ಚಿಸುತ್ತಿದ್ದೇನೆ" ಎಂದು ರಾಮ್‌ದೇವ್ ತಿಳಿಸಿದ್ದಾರೆ. ಏನಿದು ವಿವಾದ?ಅಲೋಪತಿ ಒಂದು ಅವಿವೇಕದ ವಿಜ್ಞಾನ. ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ಜನರು ಮೃತಪಟ್ಟಿದ್ದಾರೆ ಎಂಬುದಾಗಿ ರಾಮ್‌ದೇವ್ ಹೇಳಿದ್ದರು. ಇದು ಭಾರೀ ವಿವಾದದ ದಾರಿ ಹಿಡಿಯಿತು. ಅಲೋಪಥಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒತ್ತಾಯಿಸಿತು. ವಿವಾದದ ಹಿನ್ನೆಲೆಯಲ್ಲಿ ರಾಮ್‌ದೇವ್ ಅವರಿಗೆ ಪತ್ರ ಬರೆದಿದ್ದ 'ನಿಮ್ಮ ಹೇಳಿಕೆಯು ಕೊರೊನಾ ವಾರಿಯರ್‌ಗಳನ್ನು ಅಪಮಾನಿಸುತ್ತಿದೆ. ದೇಶದ ಜನರ ಭಾವನೆಗಳನ್ನು ಘಾಸಿಗೊಳಿಸುತ್ತಿದೆ. ಅಲೋಪತಿ ಕುರಿತ ನಿಮ್ಮ ಹೇಳಿಕೆಯು ಆರೋಗ್ಯ ಕಾರ್ಯಕರ್ತರ ಆತ್ಮಸ್ಥೈರ್ಯಕ್ಕೆ ಧಕ್ಕೆ ತರುತ್ತಿದೆ. ಕೋವಿಡ್‌ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತಿದೆ,' ಎಂದಿದ್ದರು. ಕೂಡಲೇ ಈ ಹೇಳಿಕೆ ಹಿಂದಕ್ಕೆ ಪಡೆಯುವಂತೆ ಸೂಚನೆ ನೀಡಿದ್ದರು. ಸಚಿವರ ಅಸಮಾಧಾನದ ಬೆನ್ನಲ್ಲೇ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಒಂದು ರೀತಿಯಲ್ಲಿ ಕ್ಷಮೆ ಕೇಳಿದ್ದಾರೆ