ಆಕ್ಸಿಜನ್‌ ಘಟಕ ನಿರ್ಮಾಣಕ್ಕೆ ವಿಶೇಷ ರಿಯಾಯಿತಿ, ಶೀಘ್ರ ಘೋಷಣೆ - ಜಗದೀಶ್‌ ಶೆಟ್ಟರ್‌

ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ಆರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ವಿಶೇಷ ರಿಯಾಯಿತಿ ಪ್ರಸ್ತಾವನೆ ರಚಿಸಿ ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕ ನಿರ್ಮಾಣಕ್ಕೆ ವಿಶೇಷ ರಿಯಾಯಿತಿ, ಶೀಘ್ರ ಘೋಷಣೆ - ಜಗದೀಶ್‌ ಶೆಟ್ಟರ್‌
Linkup
ಬೆಂಗಳೂರು: ರಾಜ್ಯದಲ್ಲಿ ನೂತನ ಆರಂಭಿಸುವ ನಿಟ್ಟಿನಲ್ಲಿ ಉದ್ಯಮಿಗಳನ್ನು ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ವಿಶೇಷ ರಿಯಾಯಿತಿ ಪ್ರಸ್ತಾವನೆ ರಚಿಸಿ ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಲಾಗಿದೆ ಎಂದು ಕೈಗಾರಿಕಾ ಸಚಿವ ತಿಳಿಸಿದರು. ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಸಂಬಂಧ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದ ಅವರು, "ರಾಜ್ಯದಲ್ಲಿ ಆಮ್ಲಜನಕದ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರಕಾರದ ಸಹಕಾರದಿಂದ ಹಾಗೂ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆ ಆಗುತ್ತಿರುವುದರಿಂದ ಆಮ್ಲಜನಕದ ಬೇಡಿಕೆ ನಿಧಾನವಾಗಿ ತಗ್ಗುತ್ತಿದೆ. ತಜ್ಞರ ಅಂದಾಜಿನಂತೆ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿ ಮಾಡುವುದು ನಮ್ಮ ಗುರಿ," ಎಂದರು. ಕೇಂದ್ರ, ರಾಜ್ಯ ಮತ್ತು ಹಲವಾರು ಸಾರ್ವಜನಿಕ ಸಂಸ್ಥೆಗಳು ಆಮ್ಲಜನಕ ಘಟಕ ಸ್ಥಾಪನೆಗೆ ಮುಂದಾಗಿವೆ. ಅದರ ಸ್ಥಾಪನೆ ಕಾರ್ಯವನ್ನು ಚುರುಕುಗೊಳಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು ಎಂದು ಅವರು ಹೇಳಿದೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ, ಆಯುಕ್ತೆ ಗುಂಜನ್‌ ಕೃಷ್ಣಾ ಸೇರಿದಂತೆ ಹಲವರು ಸಭೆಯಲ್ಲಿಉಪಸ್ಥಿತರಿದ್ದರು.