ಆಕ್ಸಿಜನ್‌ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ಆಮದು ಸುಂಕ ರದ್ದುಗೊಳಿಸಿದ ಕೇಂದ್ರ ಸರಕಾರ

ಆಮ್ಲಜನಕ ಮತ್ತು ಆಮ್ಲಜನಕಕ್ಕೆ ಸಂಬಂಧಿಸಿದ ಉಪಕರಣಗಳ ಆಮದಿನ ಮೇಲೆ ಮೂಲ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್ ಅನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಮನ್ನಾ ಮಾಡಿದೆ.

ಆಕ್ಸಿಜನ್‌ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ಆಮದು ಸುಂಕ ರದ್ದುಗೊಳಿಸಿದ ಕೇಂದ್ರ ಸರಕಾರ
Linkup
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಕೈಮೀರಿರುವ ಹಿನ್ನೆಲೆಯಲ್ಲಿ ಆಕ್ಸಿಜನ್‌ಗೆ ಎಲ್ಲಿಲ್ಲದ ಬೇಡಿಕೆ ಕಂಡುಬಂದಿದೆ. ಹೀಗಾಗಿ ಮತ್ತು ಆಮ್ಲಜನಕಕ್ಕೆ ಸಂಬಂಧಿಸಿದ ಉಪಕರಣಗಳ ಆಮದಿನ ಮೇಲೆ ಮೂಲ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್ ಅನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಈ ವಿನಾಯಿದೆ ಮುಂದಿನ ಮೂರು ತಿಂಗಳವರೆಗೆ ಅನ್ವಯವಾಗಲಿದೆ. ದೇಶದಲ್ಲಿ ಆಮ್ಲಜನಕ ಲಭ್ಯತೆಯನ್ನು ಹೆಚ್ಚಿಸಲು ಕೈಗೊಂಡ ಕ್ರಮಗಳ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮನೆಯಲ್ಲಿ ಮತ್ತು ಆಸ್ಪತ್ರೆಗಳಲ್ಲಿ ರೋಗಿಯ ಆರೈಕೆಗೆ ಅಗತ್ಯವಿರುವ ವೈದ್ಯಕೀಯ ದರ್ಜೆಯ ಆಮ್ಲಜನಕ ಮತ್ತು ಉಪಕರಣಗಳ ಪೂರೈಕೆ ಹೆಚ್ಚಿಸುವ ಅನಿವಾರ್ಯವಿದೆ ಎಂದು ಪ್ರಧಾನ ಮಂತ್ರಿ ಒತ್ತಿ ಹೇಳಿದರು. ಆಮ್ಲಜನಕ ಮತ್ತು ವೈದ್ಯಕೀಯ ಪೂರೈಕೆಯ ಲಭ್ಯತೆಯನ್ನು ಹೆಚ್ಚಿಸಲು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಹಗಲು ರಾತ್ರಿ ಕೆಲಸ ಮಾಡಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು. ಅಂತಹ ಉಪಕರಣಗಳ ತಡೆರಹಿತ ಮತ್ತು ತ್ವರಿತ ಕಸ್ಟಮ್ ಅನುಮತಿಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಕಂದಾಯ ಇಲಾಖೆಗೆ ನಿರ್ದೇಶನ ನೀಡಿದರು. ಕೋವಿಡ್ ಲಸಿಕೆಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕವನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ 3 ತಿಂಗಳ ವರೆಗೆ ವಿನಾಯಿತಿ ನೀಡಬೇಕು ಎಂದು ನಿರ್ಧರಿಸಲಾಯಿತು.