ಆತ್ಮಹತ್ಯೆಗೆ ಯತ್ನಿಸಿಲ್ಲ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ: ಉದ್ಯಮಿ ಪ್ರಭಾಕರ ರೆಡ್ಡಿ ಸ್ಪಷ್ಟನೆ

ಇತ್ತೀಚೆಗೆ ಎಚ್‌. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌​ ಸೇರಿದ ಪ್ರಭಾಕರ ರೆಡ್ಡಿಯನ್ನು ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ದಕ್ಷಿಣ ಕ್ಷೇತ್ರದ ಜೆಡಿಎಸ್‌​ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಇದೀಗ ಈ ರೀತಿ ಆತ್ಮಹತ್ಯೆ ವದಂತಿ ಹಬ್ಬಿದೆ.

ಆತ್ಮಹತ್ಯೆಗೆ ಯತ್ನಿಸಿಲ್ಲ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ: ಉದ್ಯಮಿ ಪ್ರಭಾಕರ ರೆಡ್ಡಿ ಸ್ಪಷ್ಟನೆ
Linkup
: 'ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಮಾಡಿಕೊಂಡಿರುವುದಾಗಿ ಹಬ್ಬಿದೆ. ಅದನ್ನು ನಂಬಬೇಡಿ' ಎಂದು ರಿಯಲ್‌ ಎಸ್ಟೇಟ್‌ ಉದ್ಯಮಿ ಆರ್‌. ಸ್ಪಷ್ಟನೆ ನೀಡಿದ್ದಾರೆ. 'ಸಾಯಿ ಡೆವಲಪರ್ಸ್‌ ಮಾಲೀಕರೂ ಆಗಿರುವ ಪ್ರಭಾಕರ ರೆಡ್ಡಿ, ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಮುಂದಾಗಿದ್ದರು' ಎಂಬ ಸುದ್ದಿ ಹರಿದಾಡಿತ್ತು. ಈ ಸಂಬಂಧ ಆಸ್ಪತ್ರೆಯಿಂದಲೇ ಪ್ರಭಾಕರ ರೆಡ್ಡಿ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ. 'ನನಗೆ ಕೋವಿಡ್‌ ಸೋಂಕು ತಗಲಿತ್ತು. ಬಳಿಕ ಮೊನ್ನೆ ನಡೆದ ದಿನಸಿ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಶ್ವಾಸಕೋಶ ಮತ್ತು ಗಂಟಲಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯ ವಾರ್ಡ್‌ನಲ್ಲೇ ಇದ್ದು, ಯಾವುದೇ ಸಮಸ್ಯೆ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಎಚ್‌. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಸೇರಿದ ಪ್ರಭಾಕರ ರೆಡ್ಡಿಯನ್ನು ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಕೊರೊನಾ ಲಾಕ್‌ಡೌನ್‌ ವೇಳೆ ಕ್ಷೇತ್ರದ ಜನತೆಗೆ ದಿನಸಿ ಕಿಟ್‌ ವಿತರಣೆ ಮಾಡುತ್ತಿದ್ದ ವೇಳೆ ಈ ವದಂತಿ ಹಬ್ಬಿದೆ.