ಇ-ಶ್ರಮ್‌ ಯೋಜನೆಯಿಂದ ಏನೆಲ್ಲ ಲಾಭ? ಹೆಸರು ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ!

ಚಿಕ್ಕಮಗಳೂರು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಅಸಂಘಟಿತ ಕಾರ್ಮಿಕರು ಸಮಗ್ರ ರಾಷ್ಟ್ರೀಯ ದತ್ತಾಂಶ (ಇ-ಶ್ರಮ್‌) ಯೋಜನೆಯಡಿ ಹೆಸರು ನೋಂದಾಯಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಹೇಳಿದರು.

ಇ-ಶ್ರಮ್‌ ಯೋಜನೆಯಿಂದ ಏನೆಲ್ಲ ಲಾಭ? ಹೆಸರು ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ!
Linkup
ಚಿಕ್ಕಮಗಳೂರು: ಜಿಲ್ಲೆಯ ಪ್ರತಿಯೊಬ್ಬ ಅರ್ಹ ಸಮಗ್ರ ರಾಷ್ಟ್ರೀಯ ದತ್ತಾಂಶ (ಇ-ಶ್ರಮ್‌) ಯೋಜನೆಯಡಿ ಹೆಸರು ನೋಂದಾಯಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಸಂಘಟಿತ ಕಾರ್ಮಿಕ ನೋಂದಣಿಗೆ ಸಮಗ್ರ ರಾಷ್ಟ್ರೀಯ ಡೇಟಾಬೇಸ್‌ (ಎನ್‌ಡಿಯುಡಬ್ಲೂ) ಜಾರಿಗಾಗಿ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿ ಮತ್ತು ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌ ಲಾಕ್‌ಡೌನ್‌ ಸಂದರ್ಭ ಅನೇಕ ಶ್ರಮ ಜೀವಿಗಳು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಇ-ಶ್ರಮ್‌ ಪೋರ್ಟಲ್‌ ಮೂಲಕ ಲಭ್ಯವಾಗುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅಧಿಕಾರಿಗಳು ಶ್ರಮಿಸಬೇಕು. ಪ್ರಸ್ತುತ ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಲ್ಲಿ ಅವರಿಗೆ ಸರಕಾರದಿಂದ ಈ ಯೋಜನೆಯ ಲಾಭ ನೇರವಾಗಿ ದೊರೆಯಲಿದೆ ಎಂದರು. ನೋಂದಣಿ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಇ-ಶ್ರಮ್‌ ಪೋರ್ಟಲ್‌ ನಲ್ಲಿ ಸ್ವಯಂ ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಂಡು ಯುಎನ್‌ ಗುರುತಿನ ಚೀಟಿ ಪಡೆಯಬಹುದಾಗಿದೆ. ನೋಂದಣಿಗೆ ಆಧಾರ್‌ ಕಾರ್ಡ್‌, ಆಧಾರ್‌ ಸಂಖ್ಯೆಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆ ವಿವರಗಳಿರಬೇಕು ಎಂದು ಹೇಳಿದರು. ನೋಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆ ಪಡೆಯಬಹುದಾಗಿದೆ.1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾಬಿಮಾ ಯೋಜನೆ ಪ್ರಯೋಜನ (ಅಪಘಾತದಿಂದ ಮರಣ ಹೊಂದಿದ್ದಲ್ಲಿಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ರೂ. 2 ಲಕ್ಷ ಹಾಗೂ ಭಾಗಶ: ಅಂಗವಿಕಲತೆ ಹೊಂದಿದ್ದಲ್ಲಿ 1 ಲಕ್ಷ ಪಡೆಯಬಹುದಾಗಿದೆ) ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿ ಪಡೆಯಬಹುದಾಗಿದೆ ಎಂದರು. ಸಹಾಯಕ ಕಾರ್ಮಿಕ ಆಯುಕ್ತ ಕೆ.ಟಿ.ನಾಗರಾಜ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಜು, ಕಾರ್ಮಿಕ ಅಧಿಕಾರಿ ಸಿದ್ದರಾಜು ಮತ್ತಿತರರಿದ್ದರು. ಯೋಜನೆ ವ್ಯಾಪ್ತಿಗೆ ಯಾರೆಲ್ಲ ಅರ್ಹ? ಇ-ಶ್ರಮ್‌ ಯೋಜನೆಯಡಿ ನೋಂದಣಿಗೆ ಕಟ್ಟಡ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಕೃಷಿ ಸಂಗೋಪನಾಕಾರರು, ನೇಕಾರರು, ಬಡಗಿಗಳು, ಆಶಾ ಕಾರ್ಯಕರ್ತೆಯರು, ಛಾಯಾಚಿತ್ರಗ್ರಾಹಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸದವರು, ಪತ್ರಿಕೆ ಮಾರಾಟಗಾರರು, ನರೇಗಾ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ತರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ಲೈನ್‌ ಸೇವಾ ಕಾರ್ಮಿಕರು, ಟೈಲರ್‌ಗಳು, ಹೋಟೆಲ್‌, ಬೇಕರಿ ಕಾರ್ಮಿಕರು, ವಲಸೆ ಕಾರ್ಮಿಕರು ಸೇರಿದಂತೆ ಒಟ್ಟಾರೆ 156 ವರ್ಗಗಳ 16-59 ವರ್ಷದೊಳಗಿನವರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.