ಇವಿ ಬ್ಯಾಟರಿ ಉತ್ಪಾದನೆ, ರಾಜ್ಯದಲ್ಲಿ ₹8000 ಕೋಟಿ ಹೂಡಿಕೆ ಮಾಡಲಿದೆ ಐಬಿಸಿ

IBC battery plant in Karnataka: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್‌ನ್ಯಾಷನಲ್ ಬ್ಯಾಟರಿ ಕಂಪನಿಯು ಕರ್ನಾಟಕದಲ್ಲಿ ತನ್ನ ಘಟಕವನ್ನು ಸ್ಥಾಪಿಸಲು ತೀರ್ಮಾನಿಸಿದೆ. ಈ ಸಂಬಂಧ ರಾಜ್ಯದಲ್ಲಿ 8,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾಗಿದ್ದು, ಕರ್ನಾಟಕ ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ರಾಜ್ಯ ಸರಕಾರ ಹಾಗೂ ಕಂಪನಿ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.